ಕುತಂತ್ರದಿಂದ ಕುರ್ಚಿ ಉಳಿಸಿಕೊಳ್ಳಲು ಕುಮಾರ್ ಪ್ರಯತ್ನ: ಬಿಎಸ್ ವೈ

0
7

ಚಾಮರಾಜನಗರ:- ಪೊಲೀಸ್ ಅಧಿಕಾರಿಗಳ ಮೂಲಕ ಮಂಡ್ಯಕ್ಕೆ ಹಣ ರವಾನೆಯಾಗುತ್ತಿದ್ದು, ಕುತಂತ್ರದಿಂದ ಗೆಲುವು ಸಾಧಿಸಲು ಮುಖ್ಯಮಂತ್ರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರತಿ ಬೂತ್ ಗೆ 5 ಲಕ್ಷ ಹಂಚಿಕೆ ಮಾಡುತ್ತಿದೆ ಎಂಬ ಮಾಹಿತಿ ಮಾಧ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಗುತ್ತಿಗೆದಾರರ ಮೂಲಕ ಮತದಾರರಿಗೆ ಹಣ ಹಂಚಿಕೆ ಮಾಡಲು ಸಂಚು ನಡೆಯುತ್ತಿದೆ ಎಂದು ದೂರಿದ್ದಾರೆ.
ಸುಮಲತ ಗೆಲುವು ತಡೆಯಲು ಇಂತಹ ಕುತಂತ್ರಗಳನ್ನು ನಡೆಸಲಾಗುತ್ತಿದ್ದು, ಕುತಂತ್ರದ ಮೂಲಕ ಕುರ್ಚಿ ಉಳಿಸಿಕೊಳ್ಳಲು ಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಗುಡುಗಿದರು.
ಬಿಜೆಪಿ ಒಂದಂಕಿ ದಾಟುವುದಿಲ್ಲ ಎಂಬ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತುಮಕೂರಿನಿಂದ ದೇವೇಗೌಡ ಹಾಗೂ ಮಂಡ್ಯ ಮತ್ತು ಹಾಸನಗಳಿಂದ ಮೊಮ್ಮಕ್ಕಳು ಗೆದ್ದು ಬರಲಿ. ನಂತರ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.
ಇನ್ನು ಮೋದಿ ಹೆಸರಿನವರು ಕಳ್ಳರೆಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಎಸ್ ವೈ ತಿರುಗೇಟು ನೀಡಿದ ಅವರು, ಮೂರ್ಖರು, ವಿಶ್ವಾಸ ದ್ರೋಹಿಗಳು, ನಂಬಿಕೆ ದ್ರೋಹಿಗಳ ನಾಯಕ ರಾಹುಲ್ ಗಾಂಧಿ. ಅವರು ಹುಚ್ಚರಂತೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

loading...