ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

0
27

ಕನ್ನಡಮ್ಮ ಸುದ್ದಿ-ರಾಯಬಾಗ: ರಾಯಬಾಗ ಮತಕ್ಷೇತ್ರದಲ್ಲಿ ಬರುವ ಮಾಡಲಗಿ ಹಾಗೂ ಬೂದಿಹಾಳ ಕ್ರಾಸ್ ಗ್ರಾಮದಲ್ಲಿ ೨೦೧೯ ರ ಲೋಕಸಭೆ ಚುನಾವಣೆಯ ಪ್ರಚಾರಾರ್ಥವಾಗಿ ರಾಯಬಾಗ ಮತಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕ ಬಾಳಾಸಾಹೇಬ ವಡ್ಡರ, ಬಿಜೆಪಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ರವರ ಪರ ಮತಯಾಚಿಸಿದರು.
ಬಿಜೆಪಿಗೆ ಬೆಂಬಲಿಸುವ ಮೂಲಕ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಈ ಸಮಯದಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

loading...