ಪಿಯುಸಿಯಲ್ಲಿ ಅನುತ್ತಿರ್ಣ, ನೇಣಿಗೆ ಶರಣಾದ ವಿದ್ಯಾರ್ಥಿನಿ

0
174

ಮೂಡಲಗಿ:
ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ಇಲ್ಲಿಯ ನಾಗಲಿಂಗ ನಗರದ ವಿದ್ಯಾರ್ಥಿನಿ ಐಶ್ವರ್ಯಾ ಉಮೇಶ ಬೆಳಕೂಡ(೧೯) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸೋಮವಾರ ಪ್ರಕಟಗೊಂಡ ಪಿಯುಸಿ ೨ನೇ ವರ್ಷದ ವಿಜ್ಞಾನ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಐಶ್ವರ್ಯ ಧಾರವಾಡದ ಎಸ್ ಡಿಎಂ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಓದುತ್ತಿದ್ದಳು. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...