ಮತದಾರರ ಜಾಗೃತಿ ಕಾರ್ಯಕ್ರಮ

0
51

ಕನ್ನಡಮ್ಮ ಸುದ್ದಿ-ಧಾರವಾಡ: ಏಪ್ರಿಲ್ ೨೩ ರಂದು ಜರುಗುವ ಲೋಕಸಭಾ ಚುನಾವಣೆ ಮತದಾನದಲ್ಲಿ ಉತ್ತಮ ಮತದಾನ ದಾಖಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ನಿರಂತರವಾಗಿ ವೈವಿಧ್ಯಮಯ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಕರ್ನಾಟಕ ಕಲಾ ಮಹಾವಿದ್ಯಾಲಯ ಆವರಣದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಂದ ಬೃಹತ್ ಮಾನವ ಸರಪಳಿ, ಚುನಾವಣಾ ಜಾಗೃತಿ ಗೀತೆ ,ನೃತ್ಯ ಕಾರ್ಯಕ್ರಮ ( ಸ್ವೀಪ್) ಸಮಿತಿಯ ಆಶ್ರಯದಲ್ಲಿಜರುಗಿದವು. ಆಂಗ್ಲ ವರ್ಣಮಾಲೆಯ ಹಾಗೂ ಕರ್ನಾಟಕ ನಕಾಶೆಯ ಮಾದರಿಯಲ್ಲಿ ನಿಂತ ಸಹಸ್ರಾರು ವಿದ್ಯಾರ್ಥಿಗಳು, ಚುನಾವಣಾ ಜಾಗೃತಿ ಗೀತೆಗಳಿಗೆ ಆಕರ್ಷಕ ಹೆಜ್ಜೆಗಳನ್ನು ಹಾಕಿದರು. ಗ್ರಾಮೀಣ ಶಾಲಾ ಶಿಕ್ಷಕಿಯರು ಲೋಕಸಭಾ ಚುನಾವಣೆ ೨೦೧೯ ಎಂದು ಬರೆದ ಬಿಂದಿಗೆಗಳೊಂದಿಗೆ ಹ್ಯಾಪಿ ವೋಟರ್ಸ್ ಡೇ. ಹಾಡಿಗೆ ನೃತ್ಯ ಪ್ರದರ್ಶನ ಮಾಡಿದರು. ನೆರೆದ ಸಾವಿರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಇದೇ ಮೊದಲ ಬಾರಿಗೆ ಮತದಾನಕ್ಕೆ ಅರ್ಹತೆ ಪಡೆದಿರುವ ಯುವಜನರು, ಮತಚಲಾಯಿಸಿ ಬೆರಳಿಗೆ ಹಾಕಿಸಿಕೊಂಡ ಶಾಹಿ ಹಾಗೂ ಮತಗಟ್ಟೆ ಕಾಣುವ ಹಾಗೆ ಸೆಲ್ಫಿ ತೆಗೆದುಕೊಂಡು ಜಿಲ್ಲಾ ಸ್ವೀಪ್ ಸಮಿತಿಗೆ ಕಳಿಸಿದರೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವದು. ಮತದಾನಕ್ಕೆ ಅರ್ಹತೆ ಹೊಂದದೇ ಇರುವ ಮಕ್ಕಳು ತಮ್ಮ ಪಾಲಕರು,ಪೋಷಕರಿಗೆ ಯಾವುದೇ ಆಸೆ,ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ,ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್. ಮುನಿರಾಜು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ.ಖಾಜಿ,ವಿದ್ಯಾ ನಾಡಿಗೇರ, ಎಸ್.ಎಂ.ಹುಡೇದಮನಿ, ಸ್ವೀಪ್ ಸಮಿತಿಯ ಕೆ.ಎಂ.ಶೇಖ್, ಜಿ.ಎನ್.ನಂದನ ಇದ್ದರು.

loading...