ದಕ್ಷಿಣ ಆಫ್ರಿಕಾದಲ್ಲಿ ಪ್ರವಾಹ: ಭಾರಿ ಮಳೆಯಿಂದ ಸಾವಿನ ಸಂಖ್ಯೆ 51 ಕ್ಕೆ ಏರಿಕೆ

0
30

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ ನಗರ ಡರ್ಬನ್ ಮತ್ತು ಕ್ವಾಜಲು ಪ್ರಾಂತ್ಯದಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂ ಕುಸಿತಗಳಿಂದ ಕನಿಷ್ಟ 51 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಸುಗೂಸು ಹಾಗೂ ಸಣ್ಣ ಮಗು ಸತ್ತವರಲ್ಲಿ ಸೇರಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

1,000 ಕ್ಕಿಂತ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಅಧ್ಯಕ್ಷ ಸಿರಿಲ್ ರಮಾಫೊಸ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ದೇಶದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಸುರಿದ ಭಾರಿ ಮಳೆ ಅನಾಹುತವನ್ನೇ ಸೃಷ್ಟಿಸಿದೆ.

ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರವಾಹ ಮತ್ತು ತೀವ್ರ ಗಾಳಿ ಬೀಸುವ ಸಾಧ್ಯತೆ ಇದ್ದು, ಪ್ರತಿಕೂಲ ವಾತಾವರಣದ ಎಚ್ಚರಿಕೆಯನ್ನೂ ನೀಡಲಾಗಿದೆ.

ಅನೇಕ ರಸ್ತೆಗಳು ಕೊಚ್ಚಿ ಹೋಗಿವೆ. ಭೂಕುಸಿತಗಳಿಂದ ಕಟ್ಟಡಗಳು ನಾಶಗೊಂಡಿವೆ. ದೀರ್ಘಾವಧಿಯಲ್ಲಿ ಜನರು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಳ್ಳಬೇಕಾಗುತ್ತದೆ. ಇದುವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧ್ಯಕ್ಷ ರಾಮಫೊಸಾ ತಿಳಿಸಿದ್ದಾರೆ.

ಗಾಯಗೊಂಡಿರುವ ನೂರಾರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭೂಕುಸಿತಗಳಿಂದ ಅವಶೇಷಗಳಡಿ ಸಿಲುಕಿರುವ ಜನರ ಶೋಧಕ್ಕೆ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅವರು ಹೇಳಿದ್ದಾರೆ.

loading...