ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ

0
21

ಬೆಂಗಳೂರು:- ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಂಗ ಕಲಾವಿದರಾಗಿ ಮಾತ್ರವಲ್ಲದೆ ಸಿನಿಮಾಗಳಲ್ಲಿ ಅಭಿನಯಿಸಿದ್ದ ಮಾಸ್ಟರ್ ಹಿರಣ್ಣಯ್ಯ ತಮ್ಮ ವಿಡಂಬನಾತ್ಮಕ ನಾಟಕಗಳಿಂದಲೇ ಖ್ಯಾತರಾಗಿದ್ದರು.

ಹಿರಣ್ಣಯ್ಯನವರು ‘ಲಂಚಾವತಾರ’ ನಾಟಕದ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದು, ಅಪಾರ ಜನಪ್ರಿಯತೆ ಗಳಿಸಿದ್ದರು. ಫೆಬ್ರವರಿ 15,1934ರಲ್ಲಿ ಜನಿಸಿದ್ದರು. ಇವರ ಬಾಲ್ಯದ ಹೆಸರು ನರಸಿಂಹಮೂರ್ತಿ. ತಂದೆ ಕೆ. ಹಿರಣ್ಣಯ್ಯನವರು 1940ರಲ್ಲಿ ರಚಿಸಿ, ನಿರ್ದೇಶಿಸಿದ ಚಲನಚಿತ್ರ ‘ವಾಣಿ’ಯಲ್ಲಿ ಹಿರಣ್ಣಯ್ಯನವರು ಪಾದರ್ಪಣೆ ಮಾಡಿದರು. 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರಮಾಡಲು ಹೋಗಿ ಸೋತರೂ ಛಲದಿಂದ ಕಾಲೇಜಿನಲ್ಲಿ ಸಂಘ ಕಟ್ಟಿ ‘ಆಗ್ರಹ’ ಎಂಬ ನಾಟಕವನ್ನು ಪ್ರದರ್ಶಿಸಿದರು. ಅದ್ಭುತ ಅಭಿನಯದಿಂದ ನಾಟಕವೇನೋ ಗೆದ್ದಿತು.

loading...