ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಪಂ ನೌಕರರಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ

0
736

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಪಂ ನೌಕರರಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ

.ಕನ್ನಡಮ್ಮ ಸುದ್ದಿ-ಬೆಳಗಾವಿ : ತುಟ್ಟಿ ಭತ್ಯೆ ,ಕನಿಷ್ಠ ವೇತನ, ಬಡ್ತಿ ಮೂಲಕ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಗ್ರಾಪಂ ನೌಕರರು ಜಿಲ್ಲಾ ಪಂಚಾಯತ ಎದುರು ಧರಣಿ ಕುಳಿತು ಪ್ರತಿಭಟನೆ ನಡೆದಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಜಿ.ಎಂ‌ ಜೈನೆಖಾನ್ ಮಾತನಾಡಿ, ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಪಂಚಾಯತ ರಾಜ್ಯ ಜಾರಿಗೆ ಬಂದ ಮೇಲೆ ಕಡಿಮೆ ವೇತನದಲ್ಲಿ ಕೆಲಸ ನಿರ್ವಹಿಸಿದ್ದಾರೆ. ವಿವಿಧ ಬೇಡಿಕೆಗಳಿಗೆ ರಾಜ್ಯ ಹಾಗೂ ಜಿಲ್ಲಾ ತಾಲೂಕ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದೆವೆ ಆದರೆ ನಮ್ಮ ಕೆಲ‌ ಬೇಡಿಕೆಗಳಿಗೆ ಈಡೇರಿಲ್ಲ. ಆದ್ದರಿಂದ ತಕ್ಷಣ
ಪುರಸಭೆ ಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸಿಗುವ ರೀತಿಯಲ್ಲಿ ಸರ್ಕಾರದಿಂದ ಸೌಲಭ್ಯ ದೊರಯಬೇಕು ಎಂದರು.

ಗ್ರಾಪಂ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಜಾರಿಯಾಗಿದರು ಸಹ ಅದು ಕಾಗದ ಪತ್ರದಲ್ಲಿಯೇ ಇದೆ. ಇದರಿಂದ ಗ್ರಾಮ ಪಂಚಾಯತಿ ಪಿಡಿಓಗಳು ಮನ ಬಂದಂತೆ ವೇತನ ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವೀರಭದ್ರ ಕಂಪ್ಲಿ, ಎಲ್.ಎಸ್ ನಾಯಕ, ಸಂಜಯ ಹೊಸಮನಿ, ಕಲ್ಲಪ್ಪ‌ ಮಾದರ, ಯಲ್ಲಪ್ಪ ನಾಯಕ, ಸಿಂಕದರ ಸೈಯದ ಸೇರಿದಂತೆ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

loading...