ಅಪಘಾತ : ಮೃತರ ಕುಟುಂಬಕ್ಕೆ ವ್ಯಕ್ತಿಕ ಪರಿಹಾರ

0
24

ಬಾಗಲಕೋಟೆ: ಮುದ್ದೆÃಬಿಹಾಳ ತಾಲೂಕಿನ ಕಂದಗನೂರ ಬಳಿ ಮಿನಿ ಟ್ರಕ್ ಉರುಳಿದ ಪರಿಣಾಮ ಮೃತಪಟ್ಟ ಬಾಗಲಕೋಟೆ ಜಿಲ್ಲೆಯ ಹಳದೂರ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ತಲಾ ೨ ಲಕ್ಷ ರೂ. ಪರಿಹಾರಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ರವಿವಾರ ಮೃತರ ಕುಟುಂಬಗಳಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ೧ ಲಕ್ಷ ರೂ. ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ೧ ಲಕ್ಷ ರೂ. ಸೇರಿ ಪ್ರತಿ ಕುಟುಂಬಕ್ಕೆ ತಲಾ ೨ ಲಕ್ಷ ರೂ.ಗಳಂತೆ ವ್ಯಯಕ್ತಿಕವಾಗಿ ಪರಿಹಾರಧನ ನೀಡುವುದಾಗಿ ತಿಳಿಸಿದರು. ಹೆಚ್ಚಿನ ಪರಿಹಾರಕ್ಕಾಗಿ ಈಗಾಗಲೇ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಅಪಘಾತದಲ್ಲಿ ಗಾಯಗೊಂಡ ೨೭ ಜನರನ್ನು ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ತೀವ್ರಗಾಯಗೊಂಡ ಮೂರವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ಅವರು ಸಹ ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸದರು.
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ನಂತರ ಬಾಗಲಕೋಟೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಪತ್ರಕರ್ತರೊಂದಿಗೆ ಮಾತನಾಡಿ ಬಾಗಲಕೋಟೆ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸುವ ನಿಟ್ಟಿನಲ್ಲಿ ಹೆರಕಲ್ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಬಾಗಲಕೋಟೆ ಪಟ್ಟಣ ಅಬಿವೃದ್ದಿ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಆದರೆ ಮಾರ್ಚ ಅಂತ್ಯಕ್ಕೆ ಯೋಜನೆ ಪೂರ್ಣಗೊಳಿಸಿ ನೀರು ಪೂರೈಸುವುದಾಗಿ ಹೇಳಿದ್ದು, ಇಲ್ಲಿಯವರೆಗೆ ಯೋಜನೆ ಪೂರ್ಣಗೊಂಡಿರುವದಿಲ್ಲ. ಇದರಿಂದ ಬಿಟಿಡಿಎ ಕಾರ್ಯವೈಖರಿಯನ್ನು ಕಂಡು ಅಸಮಧಾನ ವ್ಯಕ್ತಪಡಿಸಿದರು.
ಹೆರಕಲ್ ಕುಡಿಯುವ ನೀರು ಪೂರೈಸುವ ಯೋಜನೆಯಯನ್ನು ಬಿಟಿಡಿಎ ಬದಲಿಗೆ ವಾಟರ್ ಬೋರ್ಡಗೆ ಹಸ್ತಾಂತರಿಸುವ ಕುರಿತು ೬ ದಿನಗಳ ನಂತರ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು. ಈ ಹಿಂದೆ ಹೆರಕಲ್ ಕುಡಿಯುವ ನೀರಿನ ಯೋಜನೆ ಬಗ್ಗೆ ನಿರಂತರವಾಗಿ ಗಮನಿಸಸುತ್ತಿದ್ದ ಬಗ್ಗೆಯೂ ತಿಳಿಸಿದರು. ಫಸಲ ಭೀಮಾ ಯೋಜನೆ ರೈತರಿಗೆ ಅನುಕೂಲವಾಗುವುದಕ್ಕಿಂತಲೂ ಖಾಸಗಿ ವಿಮಾ ಕಂಪನಿಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ. ಹೀಗಾಗಿ ರಾಜ್ಯ ಸರಕಾರದಿಂದ ಫಲಸಭೀಮಾ ಯೋಜನೆ ನಿಯಮಾವಳಿಗಳು ಜಾಸ್ತಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಾಡಲು ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

loading...