ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೈ ನಾಯಕರ ಕಸರತ್ತು

0
10

ಬೆಂಗಳೂರು:- ರಾಜ್ಯ ಸಚಿವ ಸಂಪುಟ ವಿಸ್ತರಣೆ, ಅತೃಪ್ತ ಶಾಸಕರ ಅಸಮಾಧಾನ ನಿವಾರಣೆ ಕುರಿತು ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ , ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರುಗಳು ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಕಸರತ್ತು ನಡೆಸಿದ್ದಾರೆ.

ಈ ಸಭೆಯಲ್ಲಿ ಗೃಹ ಸಚಿವ ಎಂ ಬಿ ಪಾಟೀಲ್, ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಭಾಗಿಯಾಗಿದ್ದಾರೆ.

ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ಬಗ್ಗೆಯೂ ನಾಯಕರು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.

loading...