ಬೆಂಗಳೂರು ರೈಲು ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ : ನಗರದಾದ್ಯಂತ ಕಟ್ಟೆಚ್ಚರ

0
18

ಬೆಂಗಳೂರು:- ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಇಂದು ದೇಶೀಯ ಗ್ರೆನೇಡ್ ಮಾದರಿ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಬಿಹಾರಕ್ಕೆ ತೆರಳಬೇಕಿದ್ದ ಸಂಘಮಿತ್ರಾ ಪಾಟ್ನಾ ಎಕ್ಸ್‌ಪ್ರೆಸ್‌ ರೈಲಿನ ಎಸ್‌ 1 ಬೋಗಿಯಲ್ಲಿ ಗ್ರೆನೇಡ್ ಬಾಂಬ್ ಪತ್ತೆಯಾಗಿದೆ ಎಂಬ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಶೋಧನಾ ಕಾರ್ಯ ಆರಂಭಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ಸದ್ಯಕ್ಕೆ ಪತ್ತೆಯಾದ ಬಾಂಬ್ ನಿಂದ ಯಾವುದೇ ಅಪಾಯ ಇಲ್ಲ. ರೈಲ್ವೆ ನಿಲ್ದಾಣದಲ್ಲಿ ಹಾಕಲಾಗಿರುವ ಸಿಸಿಟಿವಿ ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲ ರೈಲುಗಳ ತಪಾಸಣೆ ಕೈಗೊಳ್ಳಲಾಗಿದೆ. ಸಿಆರ್‌ಪಿಎಫ್ , ಆರ್ ಪಿ ಎಫ್, ರಾಜ್ಯ ಪೊಲೀಸರು ಹಾಗೂ ಬಾಂಬ್ ನಿಷ್ಕಿಯ ಮತ್ತು ಶ್ವಾನ ದಳ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿವೆ ಎಂದು ಅವರು ಹೇಳಿದ್ದಾರೆ.

ಬಿಹಾರಕ್ಕೆ ತೆರಳಬೇಕಿದ್ದ ಸಂಘಮಿತ್ರ – ಪಾಟ್ನಾ ರೈಲಿನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕಿಳಿಸಿ ತಪಾಸಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

loading...