ನೀರಿನ ಸಮಸ್ಯೆಗೆ ಮುಂಜಾರೂಕತಾ ಕ್ರಮ ಕೈಗೊಳ್ಳುವಂತೆ ಸೂಚನೆ

0
1

ಯಲ್ಲಾಪುರ: ಮುಂಗಾರು ಪ್ರವೇಶ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ಹಾಗೂ ನಿತ್ಯ ಬಳಕೆಯ ನೀರಿಗೆ ಹೆಚ್ಚಿನ ಸಮಸ್ಯೆಯಾಗಬಹುದಾಗಿದ್ದು ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಮುಂಜಾರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶನಿವಾರ ತಾಲೂಕ ಪಂಚಾಯತಿ ಸಭಾಭವನದಲ್ಲಿ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ಮೂಲಭೂತ ಅವಶ್ಯಕತೆಯಾದ ಕುಡಿಯುವ ನೀರನ್ನು ಪೂರೈಸಲು ಆಯಾ ಗ್ರಾಮದ ಸಮೀಪವಿರುವ ಖಾಸಗಿಯವರ ನೀರು ಲಭ್ಯವಿರುವ ಕೊಳವೆಬಾವಿಗಳನ್ನು ಗುರುತಿಸಿ ಅವರಿಂದ ಒಡಂಬಡಿಕೆ ಮಾಡಿಕೊಂಡು ನೀರಿನ ಕೊರತೆಯಾದ ಸಂದರ್ಭದಲ್ಲಿ ಜನರಿಗೆ ನೀರೊದಗಿಸಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು ಸಮಸ್ಯೆಯ ಬಗ್ಗೆ ಮಾಧ್ಯಮಗಳಲ್ಲಿ ಬರುವ ಮುಂಚೆಯೇ ಕ್ರಮ ಕೈಗೊಳ್ಳುವ ಮೂಲಕ ಜನರಿಗೆ ಉತ್ತಮ ಸೇವೆ ನೀಡಬೇಕು ಎಂದರು.
ಗ್ರಾಮ ಪಂಚಾಯತಿಗಳು 14ನೇ ಹಣಕಾಸು ಯೋಜನೆಯ ಅನುದಾನ ಬಳಕೆ ಮಾಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಹಾಗೂ ದುಡಿಯುವ ಕೈಗಳಿಗೆ ಕೆಲಸ ನೀಡಿರುವ ಕುರಿತುÀ, ವೇತನ ಬಟವಡೆಯಾದ ಕುರಿತು ಮಾಹಿತಿ ಪಡೆದರು.ಹಾಗೂ
ಜಾನುವಾರುಗಳಿಗೆ ಕುಡಿಯಲು ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು ಮುಂಗಾರು ಸಮೀಪಿಸುತ್ತಿದ್ದು ತಾಲೂಕಿನ ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ಅಧಿಕಾರಿಗೆ ಸೂಚಿಸಲಾಯಿತು.
ಮಳೆಗಾಲದಲ್ಲಿ ಗಾಳಿ ಹಾಗೂ ಮಳೆ, ನದಿಗೆ ಮಹಾಪೂರ ಮೊದಲಾದ ಸಂದರ್ಭಗಳನ್ನು ಎದುರಿಸಲು ಸಿದ್ಧತೆ ನಡೆಸಬೇಕು ಎಂದು ಸೂಚಿಸಿದರು.ಮಳೆಗಾಲದ ಹೊತ್ತಿನಲ್ಲಿ ಗಾಳಿ ಮಳೆಗೆ ಹೆಚ್ಚಿನ ಅನಾಹುತವಾಗುವ ಸ್ಥಳಗಳಿಗೆ ಹೆಸ್ಕಾಂನವರು ಆದಷ್ಟು ಬೇಗ ಸ್ಪಂದಿಸಬೇಕು ಎಂದರು.
ಈಶ್ವರ್‌ ಉಳ್ಳಾಗಡ್ಡಿ, ಡಿ.ಜಿ ಹೆಗಡೆ ಉಪಸ್ಥಿತರಿದ್ದರು. ಪ.ಪಂ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪಿಡಬ್ಲ್ಯೂಡಿ, ಪಶುಸಂಗೋಪನೆ, ಕೃಷಿ, ನೀರು ಹಾಗೂ ನೈರ್ಮಲ್ಯ ಉಪವಿಭಾಗಗಳು, ಅರಣ್ಯ, ಆರೋಗ್ಯ, ಶಿಕ್ಷಣ ಮೊದಲಾದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

loading...