ನೈಜಿರಿಯಾ: ರಸ್ತೆ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವು

0
12

ಲಾಗೋಸ್, – ನೈಜಿರಿಯಾದ ಒಂಡೋದಲ್ಲಿನ ಅಕುರೆ-ಒವೊ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ.
ಶನಿವಾರ ಬೆಳಗ್ಗೆ 3.30ರ ಸುಮಾರಿಗೆ ಪ್ರಯಾಣಿಕರ ಬಸ್ ಹಾಗೂ ಟ್ರಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ದುರ್ಘಟನೆ ನಡೆದಿದೆ. ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆಯಲ್ಲಿನ ಗುಂಡಿಯಿಂದ ಬಚಾವ್ ಆಗಲು ಟ್ರಕ್ ಚಾಲಕ ಪ್ರಯತ್ನಿಸಿದ್ದು, ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಬಸ್ ಗೆ ಬೆಂಕಿ ತಗುಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವಕ್ತಾರ ಜೋಸೆಫ್ ಹೇಳಿದ್ದಾರೆ.ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸುರಕ್ಷಿತವಾಗಿದ್ದು, ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಫೇಮಿ ಜೋಸೆಫ್ ತಿಳಿಸಿದ್ದಾರೆ.

loading...