ಕಾರ್ನಾಡ್ ನಿಧನಕ್ಕೆ ಬಿಜೆಪಿ ನಾಯಕರ ಕಂಬನಿ

0
14

ಬೆಂಗಳೂರು:- ಹಿರಿಯ ಸಾಹಿತಿ, ಪ್ರಸಿದ್ಧ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿ ಪಕ್ಷದ ಹಲವು ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ
ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿ, ಖ್ಯಾತ ಸಾಹಿತಿ, ಪ್ರಸಿದ್ಧ ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನ ನಾಡಿಗೆ ಭರಿಸಲಾರದ ನಷ್ಟ. ನಟರಾಗಿ ಪ್ರತಿಭೆ ಮೂಲಕ ಬೆಳೆದು ಬಂದ ಕಾರ್ನಾಡ್, ಹಲವಾರು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ನಾಟಕ ಕ್ಷೇತ್ರದ ಮೂಲಕ ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ
ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್, ನಾಡಿನ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನದಿಂದ ತೀವ್ರ ನೋವಾಗಿದೆ. ಉತ್ತಮ ನಾಟಕಕಾರ, ಚಲನಚಿತ್ರ ನಟರೂ ಸಹ ಆಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲು ಶ್ರೀರಾಮನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ
ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ. ನಿಷ್ಠುರವಾದಿ, ತನಗೆ ಸರಿ ಅನಿಸಿದ್ದನ್ನು ಹೇಳುವ ವ್ಯಕ್ತಿತ್ವ ಹೊಂದಿದ್ದರು. ಕಾರ್ನಾಡ್ ಅವರು ಪ್ರಜಾಪ್ರಭುತ್ವದಲ್ಲಿನ ಹೋರಾಟದ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ನೇರವಾಗಿ ಮಾತನಾಡಿದ ವ್ಯಕ್ತಿತ್ವ ರೂಪಿಸಿಕೊಂಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ

loading...