ಕುಮಾರಸ್ವಾಮಿ ಸಂಪುಟಕ್ಕೆ ಶಂಕರ್, ನಾಗೇಶ್ ಸೇರ್ಪಡೆ

0
11

ಬೆಂಗಳೂರು:- ಇಬ್ಬರು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು

ರಾಜ್ಯಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಂಪುಟದ ಹಲವು ಸಚಿವರು, ಶಾಸಕರು ಸಮಾರಂಭದಲ್ಲಿ ಹಾಜರಿದ್ದರು. ನೂತನ ಸಚಿವರಿಗೆ ರಾಜ್ಯಪಾಲರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಬ್ಬರೂ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು

ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಆರ್ ಶಂಕರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ ತಮ್ಮ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯನ್ನು (ಕೆಪಿಜೆಪಿ) ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರ ನೀಡಿದರು. ಸಿದ್ದರಾಮಯ್ಯ ಅವರು ಶಂಕರ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.

ಜೆಡಿಎಸ್ ಕೋಟಾದ ಮತ್ತೊಂದು ಖಾತೆ ಹಾಗೆಯೇ ಉಳಿಸಿಕೊಳ್ಳಲಾಗಿದೆ.

loading...