ಬೀದಿ ನಾಯಿ ದಾಳಿಗೊಳಗಾದ ಜಿಂಕೆಯ ರಕ್ಷಣೆ

0
28

 

ಕನ್ನಡಮ್ಮ ಸುದ್ದಿ-ಮುಂಡಗೋಡ: ಶುಕ್ರವಾರ ಬೀದಿ ನಾಯಿ ದಾಳಿಗೊಳಗಾಗಿದ್ದ ಜಿಂಕೆಯನ್ನು ರಕ್ಷಿಸಿ ಸುರಕ್ಷಿತವಾಗಿ ಸನವಳ್ಳಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.
ತಾಲೂಕಿನ ಕರಗಿನಕೊಪ್ಪ ಗ್ರಾಮದ ಅಂಚಿನ ಜೋಗೇಶ್ವರ ಅರಣ್ಯ ಪ್ರದೇಶದಿಂದ ಬಯಲಿಗೆ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಬೆನ್ನಟ್ಟಿ ಗಾಯಗೊಳಿಸಿವೆ. ಇದನ್ನು ಗಮನಿಸಿದ ಗ್ರಾಮಸ್ಥರು ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು, ಪಶು ವೈದ್ಯರಿಂದ ಜಿಂಕೆಗೆ ಚಿಕಿತ್ಸೆ ಕೊಡಿಸಿ ಗ್ರಾಮಸ್ಥರ ನೆರವಿನಿಂದ ವಾಹನದ ಮೂಲಕ ಕರೆದೊಯ್ದು ಸನವಳ್ಳಿ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಯಿತು.

loading...