ರಾಹುಲ್ ಗಾಂಧಿಯವರ ಜನ್ಮದಿನಾಚರಣೆ ಅಂಗವಾಗಿ ಮಕ್ಕಳಿಗೆ ಬುಕ್ಕ ವಿತರಣೆ

0
39

 

ರಾಮದುರ್ಗ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ರಾಮದುರ್ಗ ಯುವ ಕಾಂಗ್ರೆಸ್ ಅಧ್ಯಕ್ಷ ರಮೇಶ ಬಂಡಿವಡ್ಡರ ಸರ್ಕಾರಿ ಶಾಲೆಯ ಮಕ್ಕಳಿಗೆ ಬುಕ್ಕ ವಿತರಿಸುವ ಮೂಲಕ ಆಚರಣೆ ಮಾಡಿದರು.
ಸ್ಥಳೀಯ ಮಲ್ಲಮ್ಮನಗರದ ಸರ್ಕಾರಿ ಶಾಲೆಯ ಮಕ್ಕಳಿಗೆ ಬುಕ್ಕುಗಳನ್ನು ವಿತರಿಸಿ ಮಾತನಾಡಿ ಅವರು, ಕಾಂಗ್ರಸ್ ಸರ್ಕಾರ ಎಲ್ಲ ವಿದ್ಯಾರ್ಥಿಗಳು ಶಿಕ್ಷಣ ದಿಂದ ವಂಚಿತರಾಗಬಾರದೆಂದು ಉಚಿತ ಶಿಕ್ಷಣ ನೀಡುತ್ತಿದ್ದಾರೆ ಕಾರಣ ಎಲ್ಲ ಮಕ್ಕಳು ಚನ್ನಾಗಿ ಓದಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಬೇಕು ಎಂದು ಹೇಳಿದರು.

ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ನವೀನ ಗದಗ ಮಾತನಾಡಿ ದೇಶದಲ್ಲಿ ಸ್ವಾತಂತ್ರ ಬಂದಾಗಿನಿಂದ ನೂರಾರು ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳು, ತಾಂತ್ರಿÃಕತೆಗಳ ಅಭಿವೃದ್ದಿ, ಶಿಕ್ಷಣ ಕ್ಷೆÃತ್ರದಲ್ಲಿ ಸಾಕಷ್ಟು ಸುಧಾರಣೆ ಕ್ರಮಗಳನ್ನು ತಗೆದುಕೊಳ್ಳಲಾಗಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ, ಮಕ್ಕಳಿಗೆ ಶೂ ಭಾಗ್ಯ,ಕ್ಷಿÃರ ಭಾಗ್ಯ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ವಿದ್ಯಾರ್ಥಿಗಳ ಅಧ್ಯಯನಕ್ಕೆ ಒಳ್ಳೆಯ ಕೆಲಸ ಮಾಡಿದ್ದಾರೆ.
ಕಾರಣ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆ ನಿಮಿತ್ಯ ಇಂದು ಸರ್ಕಾರಿ ಶಾಲೆಯ ಮಕ್ಕಳಿಗೆ ಬುಕ್ಕನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಬದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಶೇಖರ ಸಿದ್ದಲಿಂಗಪ್ಪನವರ, ಸುರೇಶ ಜಂಗವಾಡ, ಡಾ ಯಾದವಾಡ ಸೇರಿದಂತೆ ಮುಂತಾದವರು ಇದ್ದರು.

loading...