ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

0
57

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

ಬೆಳಗಾವಿ : ನೌಕರಿ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಪ್ರಾದೇಶಿಕ ಆಯುಕ್ತರ ಮೂಲಕ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ಗುರುವಾರ ನಗರದ ಕನ್ನಡ ಸಾಹಿತ್ಯ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರಾಜ್ಯ ಸರ್ಕಾರಿ ದಿನಗೂಲಿ ನೌಕರರು ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು‌.
ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿಗೆ ಆಗಮಿಸಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘನ್ನವರ ಅವರಿಗೆ ಮನವಿ ಸಲ್ಲಿಸಿದರು.

ದಿನಗೂಲಿ ಕಾಯಂ ನೌಕರರ 34 ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು, ಇಲ್ಲದಿದ್ದರೆ ವಿಧಾನ ಮಂಡಲ ಅಧಿವೇಶನ ವೇಳೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು, ಪ್ರತಿಭಟನೆ ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಅವರು ಎಚ್ಚರಿಕೆ ನೀಡಿದರು.ಹೊರ ಗುತ್ತಿಗೆ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದು. ಒಂದು ವೇಳೆ ಯಾರನ್ನಾದರೂ ಕೆಲಸದಿಂದ ತೆಗೆದಿದ್ದರೆ ಮರು ನೇಮಕ ಮಾಡಿಕೊಳ್ಳಬೇಕು. ಪಂಜಾಬ್, ಹಿಮಾಚಲಪ್ರದೇಶ ಹಾಗೂ ಜಮ್ಮು-ಕಾಶ್ಮೀರ ರಾಜ್ಯಗಳಲ್ಲಿ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಿರುವ ಮಾದರಿಯಲ್ಲಿ ನಮ್ಮ ರಾಜ್ಯದ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳದ ಸಂಸ್ಥಾಪಕ ಡಾ..ಕೆ ಎಸ್ ಶರ್ಮಾ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ದಿನಗೂಲಿ ನೌಕರರ ಪ್ರತಿಭಟನೆ ಭಾಗಿಯಾಗಿದ್ದರು.

loading...