ಮಳೆಯಿಂದಾಗಿ ಹೇರೂರು(ಬಿ) ಗ್ರಾಮ ವಾಸ್ತವ್ಯ ಮುಂದೂಡಿಕೆ: ಜುಲೈನಲ್ಲಿ ಕಾರ್ಯಕ್ರಮ ನಿಗದಿ

0
9

ಕಲಬುರಗಿ:-ಜಿಲ್ಲೆಯ ಹೇರೂರು ( ಬಿ) ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿ ವೆಂಕಟೇಶ ಹಾಗೂ ಇತರ ಅಧಿಕಾರಿಗಳೊಂದಿಗೆ ಶುಕ್ರವಾರ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚೆ ನಡೆಸಿದ ಅವರು ಮಳೆ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದೂಡುವ ನಿರ್ಣಯ ಕೈಗೊಂಡರು.
ಸಿಎಂ ಗ್ರಾಮ ವಾಸ್ತವ್ಯ ರದ್ದಾಗಿರುವುದು ಒಂದೆಡೆ ತೀವ್ರ ನಿರಾಶೆ ಉಂಟು ಮಾಡಿದರೆ ಇನ್ನೊಂದೆಡೆ ಮಳೆ ಇಲ್ಲದೆ ಚಿಂತೆಗೊಳಗಾಗಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ನಿನ್ನೆ ರಾತ್ರಿಯಿಡಿ ಮಳೆಯಾಗಿದ್ದರಿಂದ ರೈತರ ಕೃಷಿ ಚಟುವಟಿಕೆಗಳು ಚುರುಕುಕೊಂಡಿವೆ.
ಗುರುಮಠಕಲ್ ತಾಲೂಕಿನ ಚಂಡ್ರಿಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬರುವ ಜುಲೈ ತಿಂಗಳಲ್ಲಿ ವಿಧಾನಮಂಡಲ ಅಧಿವೇಶನದ ದಿನಾಂಕಗಳನ್ನು ನೋಡಿಕೊಂಡು ಗ್ರಾಮ ವಾಸ್ತವ್ಯ ಹಾಗೂ ಜನತಾದರ್ಶನ ಕಾರ್ಯಕ್ರಮದ ದಿನಾಂಕ ಪ್ರಕಟಿಸಲಾಗುವುದು. ಯಾದಗಿರಿ ಜಿಲ್ಲೆಯ ಚಂಡ್ರಕಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

loading...