ಎಚ್.ಸಿ.ಕೊಪ್ಪಳಗೆ ಪ್ರಶಸ್ತಿ ಪ್ರದಾನ

0
24

ಗದಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ/ಪ.ಪಂ ನೌಕರರ ಸಂಘ (ರಿ) ರಾಜ್ಯ ಸಂಘಟನೆಯು ರಾಜ್ಯ ಸಂಘಟನೆಯ ಜಂಟಿ ಕಾರ್ಯದರ್ಶಿ ಹಾಗೂ ಗದಗ ಗದಗ ವಿಭಾಗದ ಪ್ರಧಾನ ಕಾರ್ಯದರ್ಶಿಯಾದ ಎಚ್.ಸಿ.ಕೊಪ್ಪಳ ಅವರಿಗೆ ಸಾರಿಗೆ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ.
ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಹಾಲ್‌ದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೮ನೇ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಸಾಧಕರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಹಾಗೂ ಸಾರಿಗೆ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಅವರಿಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಪ್ರಶಸ್ತಿ ವಿಜೇತರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಕರ್ನಾಟಕ ರಸ್ತೆ ಸಾರಿಗೆಯ ನೌಕರರನ್ನು ಸರಕಾರಿ ನೌಕರರೆಂದು ಮಾನ್ಯತೆ ನೀಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಕ್ರಮ ಜರುಗಿಸುವ ಭರವಸೆ ನೀಡಿದರು.
ಮೈಸೂರಿನ ಉರಿಲಿಂಗ ಪೆದ್ದೆÃಶ್ವರ ಸಂಸ್ಥಾನ ಶಾಖಾ ಮಠದ ಪೀಠಾಧ್ಯಕ್ಷ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ, ಕಾಂಗ್ರೆÃಸ್ ಧುರೀಣ ಹಾಗೂ ಸಂಘದ ರಾಜ್ಯ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ, ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾಮ್, ರಾಜ್ಯ ಖಜಾಂಚಿ ಎಂ.ಶಾರದಯ್ಯ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಪಾಲ್ಗೊÃಂಡಿದ್ದರು.
ಪ್ರಶಸ್ತಿ ವಿಜೇತ ಎಚ್.ಸಿ.ಕೊಪ್ಪಳ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ/ಪ.ಪಂ ನೌಕರರ ಸಂಘ (ರಿ)ದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

loading...