ಇಂದಿನಿಂದ ಮೈಕ್ ಪೊಂಪಿಯೋ ಮೂರು ದಿನಗಳ ಭಾರತ ಭೇಟಿ

0
8

ನವದೆಹಲಿ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೋ ಇಂದಿನಿಂದ ಮೂರು ದಿನಗಳ ಭಾರತ ಪ್ರವಾಸಕೈಗೊಳ್ಳಲಿದ್ದಾರೆ.
ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕದೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.
ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳನ್ನು ಅನ್ವೇಷಿಸಲು ಪೊಂಪಿಯೊ ಅವರ ಭೇಟಿ ಎರಡೂ ಕಡೆಯವರಿಗೆ ಒಂದು ಪ್ರಮುಖ ಅವಕಾಶವಾಗಿದೆ.

ಇದು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳಲ್ಲಿ ಉನ್ನತ ಮಟ್ಟದ ಮಾತುಕತೆಯನ್ನು ಮುಂದುವರಿಸಲಿದೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸುತ್ತದೆ ಮತ್ತು ವಿಸ್ತರಿಸುತ್ತದೆ. ವ್ಯಾಪಾರ ಸಂಬಂಧಗಳಲ್ಲಿನ ಕೆಲವು ಪ್ರಮುಖ ಸಮಸ್ಯೆಗಳ ಪರಿಹಾರದ ಬಗ್ಗೆ ಸಂವಾದಕ್ಕೂ ಅವಕಾಶ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ

loading...