ತುರ್ತುಪರಿಸ್ಥಿತಿ ವಿರೋಧಿಸಿದ ನಾಗರಿಕರು, ನಾಯಕರಿಗೆ ಪ್ರಧಾನಿ, ಅಮಿತ್ ಶಾ ಗೌರವ

0
43

ನವದೆಹಲಿ: ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು 1970ರ ದಶಕದಲ್ಲಿ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ನಿರ್ಭೀತಿಯಿಂದ ವಿರೋಧಿಸಿದ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗೌರವ ಸಲ್ಲಿಸಿದ್ದಾರೆ
ತುರ್ತು ಪರಿಸ್ಥಿತಿಯನ್ನು ತೀವ್ರವಾಗಿ ಮತ್ತು ನಿರ್ಭಯವಾಗಿ ವಿರೋಧಿಸಿದ ಎಲ್ಲ ಶ್ರೇಷ್ಠರಿಗೆ ಭಾರತ ವಂದನೆ ಸಲ್ಲಿಸುತ್ತದೆ. ಭಾರತದ ಪ್ರಜಾಪ್ರಭುತ್ವದ ನೀತಿಗಳು ಸರ್ವಾಧಿಕಾರಿ ಮನಸ್ಥಿತಿಯ ಮೇಲೆ ಯಶಸ್ವಿಯಾಗಿ ಮೇಲುಗೈ ಸಾಧಿಸಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ದೇಶದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.

ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಪ್ರಜಾಪ್ರಭುತ್ವದ ಸ್ಫೂರ್ತಿಯನ್ನು ಜೀವಂತವಾಗಿರಿಸಿಕೊಂಡ ಎಲ್ಲ ಸತ್ಯಾಗ್ರಹಿ ಸೇನಾನಿಗಳಿಗೆ ನಾನು ನಮಸ್ಕರಿಸುತ್ತೇನೆ ಎಂದು ನಡ್ಡಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ
ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ವರಿಷ್ಠ ಅಮಿತ್‌ ಶಾ, ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕೆಗಳನ್ನು ಹೇಗೆ ಮುಚ್ಚಲಾಯಿತು ಮತ್ತು ನಾಗರಿಕ ಮೂಲಭೂತ ಹಕ್ಕುಗಳನ್ನು ಹೇಗೆ ಕಸಿದುಕೊಳ್ಳಲಾಯಿತು ಎಂಬುದನ್ನೂ ಸ್ಮರಿಸಿದ್ದಾರೆ.
1975ರ ಜೂನ್ 25ರಿಂದ 1977ರ ಮಾರ್ಚ್ 21ರವರೆಗೆ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಲಾಗಿತ್ತು.

loading...