ರಾಜೀನಾಮೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸೌಮ್ಯಾ ರೆಡ್ಡಿ

0
21

ಬೆಂಗಳೂರು: ತಾವಿನ್ನೂ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಜಯನಗರ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆ ರಾಮಲಿಂಗಾರೆಡ್ಡಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ದರಾಗಿದ್ದೇನೆ. ತಂದೆಯವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ಹಾಗಾಗಿ, ಅವರು ರಾಜೀನಾಮೆ ಹಿಂಪಡೆಯುವ ಮಾತೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರು ಕರೆದಿರುವ ಶಾಸಕಾಂಗಿ ಸಭೆಗೆ ತಾವು ಹೋಗುತ್ತಿದ್ದು, ಸಭೆಯಲ್ಲಿ ಚರ್ಚಿಸಿ ನಂತರ ಮುಂದಿನ ತೀರ್ಮಾನ‌ ಕೈಗೊಳ್ಳುತ್ತೇನೆ ಎಂದರು.

loading...