ರಸ್ತೆ ಗುಂಡಿಗಳನು ಮುಚ್ಚಿ

0
17

ಕನ್ನಡಮ್ಮ ಸುದ್ದಿ-ಧಾರವಾಡ: ಸರಕು ಸಾಗಾಣೆ ವಾಹನಗಳಲ್ಲಿ ಸಾರ್ವಜನಿಕರು ಪ್ರಯಾಣಿಸಬಾರದು, ಅಪಘಾತ ವಲಯಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಜಾಗೃತಿ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಮೇ ೬ ರಂದು ನಡೆದ ಸಭೆಯ ಅನುಪಾಲನಾ ವರದಿ ಅನುಸಾರ ವಿವಿಧ ಇಲಾಖೆಗಳು ರಸ್ತೆ ಸುರಕ್ಷತಾ ಚಟುವಟಿಕೆಗಳನ್ನು ಕೈಗೊಂಡ ಮಾಹಿತಿಗಳನ್ನು ಪಡೆದ ಅವರು, ಸರಕು ಸಾಗಾಣೆ ಹಾಗೂ ನಿರ್ಮಾಣ ಸಾಮಗ್ರಿಗಳ ಪೂರೈಕೆ ವಾಹನಗಳಲ್ಲಿ ಸಾರ್ವಜನಿಕರು ಪ್ರಯಾಣಿಸದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ ರಸ್ತೆ ಅಡೆತಡೆಗಳು, ಸೂಚನಾ ಫಲಕಗಳನ್ನು ಅಳವಡಿಸಬೇಕು. ಗುಂಡಿಗಳನು ಮುಚ್ಚಬೇಕು ಎಂದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರವೀಂದ್ರ ಕವಲಿ, ಅಪ್ಪಯ್ಯ ನಾಲತವಾಡಮಠ, ನಗರ ಉಪ ಪೊಲೀಸ್ ಆಯುಕ್ತ ಡಾ.ಶಿವಕುಮಾರ ಗುಣಾರಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಕ್ರತಾ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಶಿಕ್ಷಣ ಇಲಾಖೆಯ ಸಹಾಯಕ ಯೋಜನಾಧಿಕಾರಿ ಶಿವಲೀಲಾ ಕಳಸಣ್ಣವರ ಸೇರಿದಂತೆ, ವಾಕರಾಸಾಸಂ ಅಧಿಕಾರಿಗಳು ಉಪಸ್ಥಿತರಿದ್ದರು.

loading...