ಸಮಾಜದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹೆಚ್ಚಿನದು

0
148

ಕನ್ನಡಮ್ಮ ಸುದ್ದಿ-ಧಾರವಾಡ:ಶಿಕ್ಷಕರು ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು ಮತ್ತು ವಿದ್ಯಾರ್ಥಿಗಳಿಗೆ ಪಾಠ ಪ್ರವಚನದಲ್ಲಿ ನೀತಿಯನ್ನು ಬೋಧನೆ ಮಾಡಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಪ್ರೊ. ಗೋಪಾಲ ಕೊಡಿಕಿಂಡಿ ಹೇಳಿದರು.
ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ವಾಣಿಜ್ಯ ಶಾಸ್ತç ವಿಷಯದ ಸಹಾಯಕ ಪ್ರಾಧ್ಯಾಪಕರುಗಳಿಗೆ ವೃತ್ತಿ ಬುನಾದಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ನೀಡಲು ಪ್ರಯತ್ನಿಸಬೇಕು. ಬದಲಾಗುತ್ತಿರುವ ಇಂದಿನ ಸಮಾಜದಲ್ಲಿ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಹೆಚ್ಚಿನದಾಗಿದೆ. ಶಿಕ್ಷಕರು ಆಸಕ್ತಿಯಿಂದ ಹಾಗೂ ಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದಲ್ಲಿ ಸುಂದರ ಹಾಗು ಸ್ವಚ್ಚ ಸಮಾಜ ನಿರ್ಮಾಣ ಮಾಡಲು ಸಾದ್ಯ ಎಂದರು.

ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿಯನ್ನು ಹೆಚ್ಚಿಸಲು ಪ್ರೆÃರಿಪಿಸಬೇಕಾದ ಕರ್ತವ್ಯ ಮತ್ತು ಪ್ರತಿಭೆಯನ್ನು ಗುರುತಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕಾಗಿದೆ. ಅಕ್ಷರತೆ, ಶಿಕ್ಷಣ ಮತ್ತು ಜ್ಞಾನವನ್ನು ಅಳವಡಿಸಿಕೊಳ್ಳುವುದು ಸಮಾಜದ ಒಂದು ಪ್ರಮುಖ ಅಂಶವಾಗಿದೆ ಶಿಕ್ಷಕರಾದವರಿಗೆ ವಿದ್ಯಾರ್ಥಿಗಳ ಮನಸ್ಸನ್ನು ಪರಿವರ್ತಿಸಿ ಜ್ಞಾನಿಗಳಾಗಿ ಮಾಡುವ ಮಹತ್ವÀವಾದ ಜವಾಬ್ದಾರಿಯಿದೆ. ಕ್ಲಾಸ್‌ರೂಮ ಬೋಧನೆಜೊತೆಗೆ ನೈತಿಕ ಮೌಲ್ಯಗಳನ್ನು ಬೋಧನೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯಗಳಲ್ಲೊಂದಾಗಿದೆ ಎಂದು ಹೇಳಿದರು.
ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಪ್ರೊÃ.ಎಸ್.ಎಮ್ ಶಿವಪ್ರಸಾದ, ಡಾ ಎಚ್.ಬಿ.ನೀಲಗುಂದ, ಡಾ ಎ.ಆರ್. ಜಗತಾಪ, ಡಾ ಅರುಂಧತಿ ಕುಲಕರ್ಣಿ, ಡಾ.ಆಯ್.ಬಿ.ಸಾತೀಹಾಳ, ಡಾ.ಮಲ್ಲಿಕಾರ್ಜುನ ಮೂಲಿಮನಿ ಇದ್ದರು.

loading...