ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

0
14

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟಿದ್ದಾಳೆ.

ಸಮೀಪದ ಕಣಬರ್ಗಿಯ ಲಕ್ಷ್ಮಿ ಮಹಾಲಿಂಗ ನಾಯ್ಕ (೩೩) ಮೃತ ಮಹಿಳೆ. ಜು.೩ ರಂದು ಇಲ್ಲಿನ ಆಟೋ ನಗರದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿಯನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಈ ಕುರಿತು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

loading...