ರೇವಣ್ಣ ಹಸ್ತಕ್ಷೇಪವೇ ರಾಜೀನಾಮೆಗೆ ಕಾರಣ: ಎಂಟಿಬಿ

0
9

ಬೆಂಗಳೂರು:-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಸಹೋದರ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರು ತಮಗೆ ವಹಿಸಿರುವ ವಸತಿ ಇಲಾಖೆಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದು, ಅವರ ವರ್ತನೆಯೇ ತಾವು ರಾಜೀನಾಮೆ ನೀಡಲು ಕಾರಣ ಎಂದು ಸಚಿವ ಎಂಟಿಬಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ತಾವು ಕೇವಲ ಹೆಸರಿಗೆ ಮಾತ್ರ ಸಚಿವನಾಗಿದ್ದು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ರೇವಣ್ಣ ಮೂಗು ತೂರಿಸಲು ಆರಂಭಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗಮನಕ್ಕೂ ತಂದಿದ್ದೆ ಆದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ತಮ್ಮ ಇಲಾಖೆಯಲ್ಲಿ ರೇವಣ್ಣ ಅವರ ಹಸ್ತಕ್ಷೇಪದಿಂದಾಗಿಯೇ ತಾವು ಕೇವಲ ಹೆಸರಿಗೆ ಮಾತ್ರ ಸಚಿವನಾಗಿ ಕೆಲಸ ಮಾಡದಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ತಮಗೆ ಒಂದು ಸಣ್ಣ ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಚಿವನಾಗಿ ಏನು ಮಾಡಲು ಸಾಧ್ಯ?. ಹೀಗಾಗಿಯೇ ತಾವು ರಾಜೀನಾಮೆ ನೀಡುವುದು ಅನಿವಾರ್ಯವಾಯಿತು ಎಂದು ತಮ್ಮ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸರಿಯಾಗಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ತಮಗೆ ಬೇಸರವಾಗಿದೆ. ಹಾಗೆಂದ ಮಾತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನವಿಲ್ಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

loading...