ಅಂಗನವಾಡಿ ನೌಕರರ ಸಮಸ್ಯೆ ನಿವಾರಿಸಿ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

0
43

ವಿಜಯಪುರ : ಅಂಗನವಾಡಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಗನವಾಡಿ ನೌಕರರ ಸಂಘದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಅಂಗನವಾಡಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ನೌಕರರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ, ಅವರ ಬದುಕು ಇನ್ನೂ ಹಸನಾಗಿಲ್ಲ. ಕಡಿಮೆ ಗೌರವಧನದಲ್ಲಿ ಜೀವನ ನಿರ್ವಹಣೆ ಕಷ್ಟವಾದರೂ ಸಹ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಮೇಲೆ ಏಕಾಏಕಿ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ನೋಟಿಸ್ ನೀಡದೇ ಅವರ ಮೇಲೆ ಕ್ರಮ ಕೈಗೊಳ್ಳುವುದು ಎಷ್ಟು ಸರಿ? ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಅಂಗನವಾಡಿ ನೌಕರರು ವಿನಾಕಾರಣ ಹಲವಾರು ಕ್ರಮಗಳನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಎರಡು ಅಥವಾ ಮೂರು ಬಾರಿ ನೋಟಿಸ್ ನೀಡಿದ ನಂತರವೇ ಅಂಗನವಾಡಿ ನೌಕರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ನೌಕರರ ಪರವಾಗಿ ಸುನಂದಾ ನಾಯಕ ಒತ್ತಾಯಿಸಿದರು.
ಅಂಗನವಾಡಿ ನೌಕರರ ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಿದ ರೈತ ಮುಖಂಡ ಭೀಮಶಿ ಕಲಾದಗಿ, ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕು, ಅಂಗನವಾಡಿ ಕೇಂದ್ರಗಳಲ್ಲಿ ಕೋಳಿ ಮೊಟ್ಟೆ, ತರಕಾರಿ ಹಣದ ಬಿಡುಗಡೆಗಾಗಿ ಮತ್ತು ಕೇಂದ್ರ ಸರ್ಕಾರದಿಂದ ೨೦೧೮ ಅಕ್ಟೊÃಬರ್‌ನಲ್ಲಿ ಹೆಚ್ಚಳವಾದ ಗೌರವಧನ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾಯಕರ್ತರ ಹಾಗೂ ಶಿಕ್ಷಕರ ಎಸ್.ಎಸ್.ಎಲ್.ಸಿ. ಆದವರಿಗೆ ಜೇಷ್ಠತಾ ಪಟ್ಟಿ ತಯಾರಿಸಿ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಭಾರತಿ ವಾಲಿ ಮಾತನಾಡಿದರು. ಅಶ್ವಿನಿ ತಳವಾರ,ಜನವಾದಿ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷೆ ಸುರೇಖಾ ರಜಪೂತ, ಸರಸ್ವತಿ ಮಠ, ಪ್ರತಿಭಾ ಕುರಡೆ, ದಾನಮ್ಮ ಗುಗ್ಗರೆ, ಸುವರ್ಣ ಹಲಗಣಿ, ಶೋಭಾ ಕಬಾಡೆ, ತಾಳಿಕೋಟಿ ಸರೋಜಾ ಸಿಂಪಿಗೇರ ಪಾಲ್ಗೊಂಡಿದ್ದರು.

loading...