ಬಸ್ ಪಾಸ್; ವಿದ್ಯಾರ್ಥಿನಿಯರ ಪ್ರತಿಭಟನೆ

0
25

ಬೆಳಗಾವಿ: ಸಾರಿಗೆ ಇಲಾಖೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಲ್ಲಿ ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಗುರುವಾರ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಕೆಎಸ್ ಆರ್ ಟಿಸಿ ಇಲಾಖೆ ಹಲವು ದಿನಗಳ ಹಿಂದೆಯೇ ಬಸ್ ಪಾಸ್ ಗಾಗಿ ಹಣ ಪಡೆದುಕೊಂಡಿದೆ. ಆದರೆ ಇಲ್ಲಿಯವರೇಗೂ ನೀಡಿಲ್ಲ. ಪ್ರತಿ ನಿದಿ ಟಿಕೇಟ್ ಪಡೆದು ಬರಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಪ್ರಶ್ನಿಸಿದರೇ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೊÃಶ ವ್ಯಕ್ತ ಪಡಿಸಿದರು.
ಇದೇ ವೇಳೆ ಅಧಿಕಾರಿಗಳ ಬಂದು ವಿದ್ಯಾರ್ಥಿನಿಯರ ಸಮಸ್ಯೆಯನ್ನು ಆಲಿಸಿ ಅಗತ್ಯ ಕ್ರಮ ಕೈಗೊಂಡು ಆದಷ್ಟು ಬೇಗ ಬಸ್ ಪಾಸ್ ನೀಡುವಂತೆ ಸೂಚಿಸಲಾಗುತ್ತದೆ ಎಂದು ಸೂಚಿಸಿದರು.

loading...