ಬೆಳಗಾವಿ‌ ನಗರದ ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಸಿಎಂಗೆ ಶಾಸಕ‌ ಅಭಯ ಪಾಟೀಲ ಮನವಿ

0
32

ಬೆಳಗಾವಿ:

ಬೆಳಗಾವಿ ನಗರದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಇವುಗಳ ದುರಸ್ಥಿಗೆ 150 ಕೋಟಿ ರು. ವಿಶೇಷ ಅನುದಾನ ನೀಡುವಂತೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ಸಿಎಂ ಭೇಟಿಯಾದ ಶಾಸಕ ಅಭಯ ಪಾಟೀಲ, ಬೆಳಗಾವಿ ನಗರದ ರಸ್ತೆಗಳು ಮಳೆಯಿಂದ ಸಂಪೂರ್ಣ ಹಾಳಾಗಿವೆ. ಇಂದರಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳ ಹೊಂಡ ಮುಚ್ಚಬೇಕಿದೆ. ಒಟ್ಟಾರೆ ಬೆಳಗಾವಿ ನಗರಕ್ಕೆ 150 ಕೋಟಿ ರೂ. ಅನುದಾನ ನೀಡಿದರೆ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ತಿಳಿಸಿದ್ದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಯಡಿಯೂರಪ್ಪ, ಈ ಪ್ರಸ್ತಾವನೆಯನ್ನು ಸಚಿವಸಂಪುಟದ ಮುಂದೆ ಮಂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಬೆಳಗಾವಿ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸಿಎಂ ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 100 ಕೋಟಿ ರು.ವಿಶೇಷ ಅನುದಾನ ನೀಡುವ ಸಂಪ್ರದಾಯ ಆರಂಭಿಸಿದ್ದರು. ಇದೀಗ ನಗರದ ಅಭಿವೃದ್ಧಿಗೆ ವಿಶೇಷ ನೂರಾ ಐವತ್ತು ಕೋಟಿ ರು. ನೀಡುವಂತೆ ಶಾಸಕ ಅಭಯ ಪಾಟೀಲ ಬೇಡಿಕೆಯನ್ನು ಶೀಘ್ರದಲ್ಲೇ ನೆರವೆರಿಸಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

loading...