ಕಾಫಿ ಉದ್ಯಮಿ ಸಿದ್ದಾರ್ಥ್‌ ನಿಧನಕ್ಕೆ ಮಾಜಿ ಸಿಎಂಗಳಿಂದ ತೀವ್ರ ಸಂತಾಪ

0
1

ಬೆಂಗಳೂರು:-ಮಾಜಿ ಮುಖ್ಯಮಂತ್ರಿ ಎಸ್ ಎಂ. ಕೃಷ್ಣ ಅವರ ಅಳಿಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವಿಟ್‌ ಮಾಡಿದ್ದಾರೆ.
ಕಾಫಿ ಉದ್ಯಮಿ ವಿ.ಜಿ ಸಿದ್ದಾರ್ಥ್ ಅವರ ದುರದೃಷ್ಟಕರ ಸಾವು ನಿಜಕ್ಕೂ ಅತೀವ ದುಖಃ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕೆಫೆ ಕಾಫಿ ಉದ್ಯಮಶೀಲತೆಯ ಮೂಲಕ ಕರ್ನಾಟಕ ಮತ್ತು ಭಾರತಕ್ಕೆ ಅವರು ನೀಡಿದ ಕೊಡುಗೆ ಅಸಾಧಾರಣವಾಗಿದ್ದು, ಯಾವಾಗಲೂ ಅವರ ಸಾಧನೆ ನಮ್ಮ ಸ್ಮೃತಿ ಪಟಲದಲ್ಲಿ ಉಳಿಯುತ್ತದೆ. ಸಿದ್ದಾರ್ಥ್ ಅಗಲಿಕೆಯ ನೋವನ್ನು ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಹಾಗೂ ಅವರ ಕುಟುಂಬಕ್ಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಿದ್ದರಾಮಯ್ಯ ಆಶಿಸಿದ್ದಾರೆ.

loading...