ಸಂಪುಟ ವಿಸ್ತರಣೆ ವಿಳಂಬ: ಟ್ವೀಟ್ ಮೂಲಕ ಮುಖ್ಯಮಂತ್ರಿ ಕಾಲೆಳೆದ ಸಿದ್ದರಾಮಯ್ಯ

0
12

ಬೆಂಗಳೂರು:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವನ್ನು ಮುಂದಿಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಕಾಲೆಳೆದಿದ್ದಾರೆ.
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ?, ಸಂಪುಟ ವಿಸ್ತರಣೆಯದ್ದೇ? ಎಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಮುಖ್ಯಮಂತ್ರಿಯ ಜೊತೆ ರಾಜ್ಯಪಾಲರನ್ನೂ ಟೀಕಿಸಿರುವ ಸಿದ್ದರಾಮಯ್ಯ, ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

loading...