ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ದುರಸ್ತಿ ಪಡಿಸುವ ಕ್ರಮ ಕೈಗೊಳ್ಳಿ

0
6

ಕುಮಟಾ: ಬೃಹತ್ ಹೊಂಡಗಳಿಂದ ಕೂಡಿರುವುದಲ್ಲದೇ ವಾಹನ ಸಂಚಾರಕ್ಕೆ ದುಸ್ತರವಾಗಿರುವ ಪಟ್ಟಣದ ಪ್ರಮುಖ ರಸ್ತೆಗಳನ್ನು ಶುಕ್ರವಾರ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ ಅವರು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಶೀಘ್ರದಲ್ಲಿ ದುರಸ್ತಿ ಪಡಿಸುವ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಗಿಬ್ ಸರ್ಕಲ್‌ನಿಂದ ಕೋರ್ಟ್ ರಸ್ತೆ, ಗುಡಿಗಾರಗಲ್ಲಿ, ಬಸ್ತಿಪೇಟೆ ಸೇರಿದಂತೆ ಪಟ್ಟಣದ ಇತರೆ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವುದರಿಂದ ಹೊಂಡಗಳನ್ನು ಅಧಿಕಾರಿಗಳೋಂದಿಗೆ ಪರಿಶೀಲಿಸಿದರು. ಪಟ್ಟಣದ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತಿರುವ ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಪುರಸಭೆ ಮತ್ತು ಸಂಬಂಧಿತ ಇಲಾಖೆಗೆ ದೂರಿದರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಶಾಸಕರ ಗಮನಕ್ಕೆ ಬರುತ್ತಿದ್ದಂತೆ ಅವರು ಶುಕ್ರವಾರ ಪಟ್ಟಣದ ಪ್ರಮುಖ ರಸ್ತೆಗಳನ್ನು ಪುರಸಭೆ, ಪಿಡಬ್ಲುಡಿ, ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆಯ ಅಧಿಕಾರಿಗಳ ಜತೆಗೆ ಪರಿಶೀಲನೆ ನಡೆಸಿ, ಹೊಂಡ ಮುಚ್ಚುವ ತುರ್ತು ಕಾಮಗಾರಿಗೆ ಸೂಚಿಸಿದರು. ಅಲ್ಲದೆ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆಗಳಲ್ಲಿ ಬಿದ್ದ ಹೊಂಡಗಳನ್ನು ಸಮರ್ಪಕವಾಗಿ ಮುಚ್ಚುವ ಮೂಲಕ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಮಳೆ ಹೊಳುವು ಕೊಟ್ಟಿದ್ದರಿಂದ ತುರ್ತು ಕಾಮಗಾರಿಯನ್ನು ಈಗಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರ ಸೂಚನೆ ಮೇರೆಗೆ ಅಧಿಕಾರಿಗಳು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ ಕಾಮಗಾರಿ ನಡೆಸಿದರು.

ಈ ಸಂದರ್ಭದಲ್ಲಿ ಪಿಡಬ್ಲುಡಿ ಇಂಜಿನೀಯರ್ ರಾಜು ಶಾನಭಾಗ, ಶಶಿಕಾಂತ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ರಾಮದಾಸ ಗುನಗಿ, ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ, ಎಪಿಎಂಸಿ ಅಧ್ಯಕ್ಷ ಧೀರೂ ಶಾನಭಾಗ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

loading...