ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ

0
32

ಬೆಳಗಾವಿ: ಪ್ರವಾಹದಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿವೇ ಎಂಬ ಮಾತುಗಳು ಕೇಳುತ್ತಿರುವ ಮಧ್ಯದಲ್ಲಿಯೂ ಸಹ ಗ್ರಾಮೀಣ ಕ್ಷೆÃತ್ರದಲ್ಲಿ ಅಭಿವೃದ್ಧಿ ಪರ್ವ ನಿರಂತರವಾಗಿ ಮುಂದುವರೆದಿದೆ.
ಹಲವಾರು ವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದ ಪ್ರದೇಶಗಳಲ್ಲಿ ಸುಮಾರು ೭೫ ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನದಿಂದ ಮಂಜೂರಾಗಿರುವ ಕಾಮಗಾರಿಗಳಿಗೆ ಅವರ ಅನುಪಸ್ಥಿತಿಯಲ್ಲಿ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಚಾಲನೆ ನೀಡಿದರು. ಸಾಂಬ್ರಾ ಗ್ರಾಮದಲ್ಲಿ ೧೫ ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಲಾಯಿತು.
ಹೊನ್ನಿಹಾಳ ಗ್ರಾಮದಲ್ಲಿ ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗೆ ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ಎರಡು ಕೊಠಡಿಗಳ ನಿರ್ಮಾಣದ ಸಲುವಾಗಿ ಭೂಮಿಯ ಪೂಜೆ ನೆರವೇರಿಸಲಾಯಿತು.
ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಅಂಬೇಡ್ಕರ್ ಕಾಲೋನಿಗೆ ಸುಮಾರು ೧೦ ಲಕ್ಷ ರೂ. ವೆಚ್ಚದಲ್ಲಿ ಫೇವರ್ಸ್ ಅಳವಡಿಸುವ ಕಾಮಗಾರಿಗೆ ಚಾಲನೆ ಚಾಲನೆ ನೀಡಲಾಯಿತು.
ಸುಳೇಬಾವಿ ಸುಮಾರು ೧೦ ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಉರ್ದು ಶಾಲೆಯ ಒಂದು ಹೆಚ್ಚುವರಿ ಕೊಠಡಿಯ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಲಾಯಿತು.
ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಎಸ್ ಡಿ ಎಮ್ ಸಿ ಅಧ್ಯಕ್ಷರು, ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಸಿಬ್ಬಂದಿ ವರ್ಗ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಾಗೇಶ ದೇಸಾಯಿ, ತಾಲೂಕ ಪಂಚಾಯತ್ ಸದಸ್ಯ ನಿಲೇಶ ಚಂದಗಡಕರ್, ಯರಗಟ್ಟಿ, ನಾನಪ್ಪ ಪಾರ್ವತಿ ಮುಂತಾದವರು ಉಪಸ್ಥಿತರಿದ್ದರು.

loading...