ಜನರ ಬದುಕು ಕಟ್ಟುವ ಕೆಲಸವಾಗಲಿ : ಅತೀಕ್

0
13

ಬೆಳಗಾವಿ: ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ರಸ್ತೆ ಮತ್ತು ಸೇತುವೆಗಳ ಸಂಪರ್ಕಗಳನ್ನು ಆದಷ್ಟು ಬೇಗನೆ ಸರಿಪಡಿಸಬೇಕೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅತೀಕ್ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರವಾಹದಲ್ಲಿ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ಪಡೆದುಕೊಂಡರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್, ರಸ್ತೆ ಹಾಗೂ ಸೇತುವೆಗಳು ಹಾಳಾಗಿರುವ ಮಾಹಿತಿ ತೆಗೆದುಕೊಂಡು ಇಲ್ಲಿಯವರೆಗೆ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಒಟ್ಟು ೨೦೨೩ ಕೀ.ಲೋ. ಮೀಟರ್ ರಸ್ತೆ ಹಾಗೂ ೯೩ ಸೇತುವೆಗಳು ಹಾಳಾಗಿದ್ದು ಅವುಗಳ ಪುನರ್ ನಿರ್ಮಾಣ ಮಾಡುವ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಗ್ರಾಮ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮಾತನಾಡಿ ಒಟ್ಟು ೧೭೭ ಗ್ರಾಮ ಪಂಚಾಯತ್ ಕಟ್ಟಡಗಳು ಶಿಥಿಲಗೊಂಡಿದ್ದು, ಅವುಗಳನ್ನು ಜಿಲ್ಲಾಧಿಕಾರಿಗಳ ಅನುದಾನದ ಜೊತೆಗೆ ಗ್ರಾಮ ಪಂಚಾಯತಿ ಅನುದಾನ ಸೇರಿಸಿ ಪಂಚಾಯತ ಹಾಗೂ ಶಾಲೆಗಳು ನಿರ್ಮಾಣ ಮಾಡಲಾಗುವುದು ತಿಳಿಸಿದರು.ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

=========ಬಾಕ್ಸ್===========

ಪ್ರವಾಹ ಪೀಡಿತ ಪ್ರದೇಶಗಳಿಗೆ ಎಲ್.ಕೆ ಅತೀಕ್ ಭೇಟಿ
ಜಿಲ್ಲಾ ಪಂಚಾಯತಿಯ ಸಭೆ ನಡೆಸಿದ ಬಳಿಕ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದಾದ ಹಾನಿಗಳನ್ನು ಅವಲೋಕಿಸಿದರು. ಕಾಕತಿ, ಚಿಕ್ಕೊÃಡಿ ತಾಲೂಕಿನ ಅಂಕಲಿ, ಅಥಣಿಯ ಹಲ್ಯಾಳ, ಅವರಖೋಡ್, ರಾಯಭಾಗ ತಾಲೂಕಿನ ಖೇಮಲಾಪುರ, ಹಾರೋಗೇರಿ, ಯರಗಟ್ಟಿ ಬಂಗಲೇ,ಶಿರಗೂರ ಸೇರಿದಂತೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ಹಾನಿಗಳನನು ವೀಕ್ಷಸಿದರು. ಕುಡಿಯುವ ನೀರು ಸರಬರಾಜು ಜಾಕ್ ವೇಲ್, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ, ಶಾಲಾ ಕಟ್ಟಡ, ಗ್ರಾಮಪಂಚಾಯತಿ ಭೇಟಿ ನೀಡಿ ಮಳೆಯ ಅವಾಂತರದಿಂದ ಆಗಿರುವ ಹಾನಿಯನ್ನು ವೀಕ್ಷಿಸಿದರು.

loading...