ಪ್ರವಾಹದಿಂದ ರೈತರ ಬೆಳೆ ಹಾನಿ; ಬೃಹತ್ ಪ್ರತಿಭಟನೆ

0
74

ಬೆಳಗಾವಿ: ನೆರೆ ಸಂತ್ರಸ್ತರಿಗೆ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದರು.
ಧರ್ಮಿವೀರ ಸಂಭಾಜಿ ಚೌಕದಲ್ಲಿ ರೈತರು ಜಮಾಗೊಂಡು ಸಂಭಾಜಿ ಮಹಾರಾಜ ಮೂರ್ತಿಗೆ ಮಾರ್ಲಾಪಣೆ ಮಾಡುವ ಮೂಲಕ ಪಾದ ಯಾತ್ರೆಯ ಮೂಲಕ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಆಗಮಿಸಿ ಮನವಿ ಸಲ್ಲಿಸಿದರು. ಇದೇ ವೇಳೆ ಮಹಾರಾಷ್ಟç ಹಾಗೂ ರಾಜ್ಯ ಸರಕಾರ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು.
ಇದೇ ವೇಳೆ ರಾಜ್ಯಾದ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿ, ರಾಜ್ಯದ ಜಲಾಶಯಗಳ ನಿರ್ವಹಣೆಯ ಹೊಣೆ ಹೊತ್ತ ಸಿಬ್ಬಂದಿ ಹಾಗೂ ಮಹಾರಾಷ್ಟçದ ಬೇಜವಾಬ್ದಾರಿ ನಿರ್ವಹಣೆಯಿಂದ ಅನೇಕ ಗ್ರಾಮಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸಂದರ್ಭ ಉಂಟಾಗಿದೆ. ಇದರಿಂದ ಜನರಿಗೆ ಅಪಾರ ಹಾನಿ ಉಂಟಾಗಿದೆ. ನಷ್ಟದ ಹೊಣೆಯನ್ನು ಮಹಾರಾಷ್ಟç ಹೊತ್ತು ಶೀಘ್ರವೇ ಪರಿಹಾರ ನೀಡಬೇಕು. ಕೇಂದ್ರ ಸರಕಾರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆಯಲಿದೆ. ರಾಜ್ಯದಲ್ಲಿ ನಡೆದಿರುವ ರೈತರ ಪ್ರತಿಭಟನೆ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದರು.
ಇನ್ನು ಜಿಲ್ಲಾ ವಕ್ತಾರರಾದ ಪ್ರವಾಹದಿಂದ ಗ್ರಾಮಗಳು ಮೂಳುಗಿ ಹಾನಿಯಾಗಲು ಮಹಾರಾಷ್ಟçವೂ ಸಹ ನೇರ ಹೊಣೆ ಆದ್ದರಿಂದ ಪ್ರವಾಹದಿಂದ ಹಾನಿಗೊಳ್ಳಗಾಗಿರುವ ಜಮೀನು ಇಲ್ಲದ ಪ್ರತಿಯೊಂದು ಕುಟುಂಬಕ್ಕೆ ೨ ಲಕ್ಷ ರೂ ಹಾಗೂ ಮನೆ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರಮಪ್ಪ ಖೇಮಲಾಪೂರೆ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

loading...