ನೂತನ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

0
39

ಬೆಳಗಾವಿ: ಗ್ರಾಮೀಣ ಮತಕ್ಷೆÃತ್ರದ ವ್ಯಾಪ್ತಿಯಲ್ಲಿ ಬರುವ ಕಟ್ಟಡ ಕಾರ್ಮಿಕರಿಗೆ ಜನ ಕಲ್ಯಾಣ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ವತಿಯಿಂದ ಕಟ್ಟಡ ಕಾರ್ಮಿಕರಿಗೆ ನೂತನ ಕಾರ್ಮಿಕರ ಗುರುತಿನ ಚೀಟಿಗಳನ್ನು ಹಿಂದವಾಡಿ ಗೋಮಟೇಶ ವಿದ್ಯಾಪೀಠದಲ್ಲಿ ಸೋಮವಾರ ಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಇವರ ಅಮೃತ ಹಸ್ತದಿಂದ ವಿತರಿಸಲಾಯಿತು.

ಇದೇ ವೇಳೆ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರು ಕಡು ಬಡವರಾಗಿದ್ದು, ಅವರ ಅನುಕೂಲಕ್ಕಾಗಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಅದರಲ್ಲಿ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಈ ಯೋಜನೆ ಅತ್ಯಂತ ಅನುಕೂಲಕರವಾಗಿದೆ. ಅಲ್ಲದೆ ಪ್ರಧಾನಿಯವರು ಇಂತಹ ಅನೇಕ ಯೋಜನೆಗಳನ್ನು ಜಾರಿ ಗೊಳಿಸಿದ್ದು ಅವುಗಳ ಬಗ್ಗೆ ಮಾಹಿತಿ ಪಡೆದು ಯಾವುದೇ ರಾಜಕೀಯ ಮಾಡದೇ ಎಲ್ಲರೂ ಅವುಗಳ ಸದುಪಯೋಗ ಪಡೆದು ಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಭಯ ಅವಲಕ್ಕಿ, ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ಕಾರ್ಯದರ್ಶಿ ಸಾಗರ ಶೇರೆಕರ, ಬಾಪುಸೊ ಪಾಟೀಲ, ಇತರರು ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

loading...