ಶಿಕ್ಷಣಕ್ಕೆ ತಕ್ಕಂತೆ ಉದ್ಯೊÃಗದ ಕೊರತೆ: ಪ್ರೊÃ.ರಾಮಚಂದ್ರಗೌಡ

0
23

ಬೆಳಗಾವಿ: ಗುಣಮಟ್ಟದ ಶಿಕ್ಷಣಕ್ಕೆ ತಕ್ಕ ಹಾಗೇ ಗೌರವ ಉದ್ಯೊÃಗ ಸಿಗುತ್ತಿಲ್ಲವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊÃ.ಎಂ ರಾಮಚಂದ್ರಗೌಡ ಹೇಳಿದರು.
ನಗರದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಮತ್ತು ಸಾಂಸ್ಕೃತಿಕ, ಕ್ರಿÃಡೆ, ಎನ್.ಎಸ್.ಎಸ್.,ರೆಡ್‌ಕ್ರಾಸ್ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ’ವನ್ನು ಉದ್ಘಾಟಿಸಿ ಮಾತನಾಡಿದರು.
ಎಂಟೆಕ್. ಇಂಜಿನಿಯರಿಂಗ್, ಎಂಬಿಎ ಮತ್ತು ಇತರೆ ಪಿಜಿ. ಮುಗಿಸಿದ ವಿದ್ಯಾರ್ಥಿಗಳು ನೇಮಕಗೊಂಡಿದ್ದಾರೆ. ಗ್ಯಾಂಗ್‌ಮೆನ್ ನೌಕರಿಗೆ ಕೇವಲ ಎಸ್ಸೆಸ್ಸೆಲ್ಸಿ ಪಾಸಾದರೆ ಸಾಕು. ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದುವುದರ ಜೊತೆಗೆ ಸಂವಹನ ಕಲೆಗಳನ್ನು ಬೆಳಿಸಿಕೊಳ್ಳಬೇಕು ಮತ್ತು ಜೀವನ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ತಮ್ಮ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಸಲು ಕಳೆಯುವ ಸಮಯವನ್ನು ಅಧ್ಯಯನ ಮಾಡಲು ಕಳೆದರೆ ಮೊದಲ ರ‍್ಯಾಂಕ್ ಬರುತ್ತಾರೆಂದು ವಿದ್ಯಾರ್ಥಿಗಳಿಗೆ ಓದಿನ ಮಹತ್ವವನ್ನು ತಿಳಿಸುತ್ತ ಗ್ರಂಥಾಲಯವನ್ನು ಚೆನ್ನಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.
ವಿಶೇಷ ಉಪನ್ಯಾಸ ನೀಡಲು ಆಗಮಿಸಿದ್ದ ಹಾಸ್ಯಕಲಾವಿದರವಿ ಭಜಂತ್ರಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು. ಇದೇ ಸಂದರ್ಭದಲ್ಲಿ ಸಾಧನೆ ಮಾಡಿದಅಧ್ಯಾಪಕರನ್ನು ಮತ್ತು ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಉಪ ಪ್ರಾಚಾರ್ಯ ಪ್ರೊ.ಬಿ.ಎಸ್. ನಾವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೊ. ಸಿ. ಎಂ. ತ್ಯಾಗರಾಜ ವಹಿಸಿದ್ದರು. ವೇದಿಕೆಯ ಮೇಲೆ ಡಾ.ವಿನಾಯಕ ಬಂಕಾಪೂರ ಸೇರಿದಂತೆ ಇತರರು ಇದ್ದರು.
ಡಾ. ಹನುಮಂತಪ್ಪ ಸಂಜೀವಣ್ಣನವರ ಸ್ವಾಗತಿಸಿದರು. ಆದಿನಾಥ ಉಪಾಧ್ಯಯ ವಂದಿಸಿದರು. ಡಾ. ಜ್ಯೊÃತಿ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

loading...