ದೆಹಲಿಯಲ್ಲಿ ಕಟ್ಟಡ ಕುಸಿದು ಇಬ್ಬರ ಸಾವು, ಮೂವರಿಗೆ ಗಾಯ

0
5

ನವದೆಹಲಿ- ನಾಲ್ಕು ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿ, ಇತರ ಮೂವರು ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದಿದೆ.

ಕಳೆದ ರಾತ್ರಿ 10.30ಕ್ಕೆ ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ದೆಹಲಿ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್, ಡಿಡಿಎಂಎ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮೋನಿ (21), ಮುಹಮ್ಮದ್ ಯಾಸೀನ್ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡ ಇತರ ಮೂವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

loading...