ಶಾಸಕ ಜಮೀರ್ ಅವರಿಗೆ ಲಘು ಹೃದಯಾಘಾತ

0
2

ಬೆಂಗಳೂರು- ಚಾಮರಾಜಪೇಟೆ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಚಿಕತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಮೀರ್ ಅವರಿಗೆ ಎದೆನೋವು ಕಂಡುಬಂದಿತ್ತು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಅವರ ಜೊತೆಗಾರರು ತಕ್ಷಣವೇ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಶೀಲಿಸಿದ ವೈದ್ಯರು ಲಘು ಹೃದಯಾಘಾತವಾಗಿದೆ ಎಂದು ತಿಳಿಸಿದ್ದು ವೈದ್ಯರು ಸದ್ಯ‌ ಸ್ಟಂಟ್ ಅಳವಡಿಸಿದ್ದಾರೆ. ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಜಮೀರ್ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

loading...