“ಸಾಂಕೇತಿಕ ಸೂರು; ಸರ್ಕಾರದ ಬದ್ಧತೆಯ ಸಂಕೇತ”

0
25

ಸಾಂಕೇತಿಕ ಸೂರು ನಿರ್ಮಿಸಿ ಕಿತ್ತೂರು ಉತ್ಸವಕ್ಕೆ ಚಾಲನೆ

“ಸಾಂಕೇತಿಕ ಸೂರು; ಸರ್ಕಾರದ ಬದ್ಧತೆಯ ಸಂಕೇತ”

ಬೆಳಗಾವಿ : ರಾಣಿ ಚನ್ನಮ್ಮ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಬಾರದು. ಬ್ರಿಟೀಷರ ವಿರುದ್ಧ ಹೋರಾಟದ ಕಹಳೆ ಮೊಳಗಿಸಿದ ಚನ್ನಮ್ಮ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದಾರೆ. ಚನ್ನಮ್ಮನ ಹೆಸರು ಅಜರಾಮರವಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಚನ್ನಮ್ಮ ಕಿತ್ತೂರು ಉತ್ಸವವನ್ನು ನೆರೆಸಂತ್ರಸ್ತರಿಗೆ ಸೂರು ಒದಗಿಸುವ ಭರವಸೆಯೊಂದಿಗೆ ವೇದಿಕೆಯಲ್ಲಿಯೇ ಸಾಂಕೇತಿಕವಾಗಿ ಮನೆಯನ್ನು ನಿರ್ಮಿಸುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಚನ್ನಮ್ಮ ಕಿತ್ತೂರು ಉತ್ಸವವನ್ನು ಉದ್ಘಾಟಿಸಿದರು.
ಕಿತ್ತೂರು ಪ್ರಾಧಿಕಾರಕ್ಕೆ ೨೦೦ ಕೋಟಿ ರೂಪಾಯಿ ಅನುದಾನ ಒದಗಿಸಲು ಎಲ್ಲರೂ ಸೇರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸವದಿ ಭರವಸೆ ನೀಡಿದರು.

ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಮಹಾಂತೇಶ ಕೌಜಲಗಿ, ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಹನಮಂತ ನಿರಾಣಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ತಾಲ್ಲೂಕು ಪಂಚಾಯತ ಅಧ್ಯಕ್ಷೆ ನೀಲವ್ವ ಫಕ್ಕೀರಣ್ಣವರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
loading...