ಏಕೀಕರಣೋತ್ತರ ಕರ್ನಾಟಕ ರಾಷ್ಟ್ರೀಯ ವಿಚಾರ ಸಂಕಿರಣ

0
6

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಹತ್ತು ವರ್ಷಗಳು ತುಂಬುತ್ತಿವೆ. ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನ. ೨೫ ಸೋಮವಾರದಂದು ಏಕೀಕರಣೋತ್ತರ ಕರ್ನಾಟಕ ಎನ್ನುವ ವಿಷಯ ಕುರಿತು ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದು ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ತಿಳಿಸಿದರು.

ಅವರು ಶನಿವಾರ ನಗರದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಯ ಕುವೆಂಪು ಸಭಾಂಗಣದಲ್ಲಿ ೨೫ರಂದು ಚಿಂತಕ ಪ್ರೊ. ಬರಗೂರು ರಾಮಚಂದ್ರಪ್ಪ ವಿಚಾರ ಸಂಕಿರಣವನ್ನು ಉದ್ಘಾಟಿಸಲ್ಲಿದ್ದಾರೆ. ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ ಏಕೀಕರಣೋತ್ತರ ಸಮಾಜೋ-ರಾಜಕೀಯ ವಿದ್ಯಮಾನಗಳ ಕುರಿತು ಹಾಗೂ ಬೆಂಗಳೂರಿನ ಆರ್ಥಿಕ ತಜ್ಞ ಪ್ರೊ. ಟಿ.ಆರ್. ಚಂದ್ರಶೇಖರ ಏಕೀಕರಣೋತ್ತರ ಸಮಾಜೋ- ಆರ್ಥಿಕ ವಿದ್ಯಮಾನಗಳ ಕುರಿತು ಉಪನ್ಯಾಸ ನೀಡಲ್ಲಿದ್ದಾರೆ ಎಂದರು.
ಅAದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನೂತನ ಸದಸ್ಯ ಪ್ರೊ. ರಂಗರಾಜ ವನದುರ್ಗ ಸಮಾರೋಪ ಮಾತುಗಳನ್ನಾಡಲ್ಲಿದ್ದಾರೆ. ಹಿರಿಯ ಕನ್ನಡ ಚಿಂತಕ ಡಾ. ಸಿದ್ದನಗೌಡ ಪಾಟೀಲ ಅತಿಥಿಗಳಾಗಿ ಆಗಮಿಸಲ್ಲಿದ್ದಾರೆ. ಆರ್‌ಸಿಯುನ ಶಾಸ್ತಿçÃಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಸ್.ಎಂ. ಗಂಗಾಧರಯ್ಯ ಅಧ್ಯಕ್ಷತೆ ವಹಿಸಲ್ಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಏಕೀಕರಣಗೊಂಡ ನಂತರ ನಡೆದ ಅನೇಕ ಘಟನೆಗಳು ನಡೆದಿವೆ. ಉತ್ತರ ಕರ್ನಾಟಕ ಪ್ರತ್ಯೇಕಗೊಳಿಸಬೇಕು ಎನ್ನುವ ಚರ್ಚೆಗಳು ನಡೆಯುತ್ತಿವೆ. ಏಕೀಕರಣದ ನಂತರದಲ್ಲಿ ಕರ್ನಾಟಕ ಹೊಂದಿದ ಅಭಿವೃದ್ಧಿಯನ್ನು ಪರಾಮರ್ಶಿಸುವುದೇ ವಿಚಾರ ಸಂಕಿರಣದ ಮುಖ್ಯ ಉದ್ದೇಶವಾಗಿದೆ.
ವಿಚಾರ ಸಂಕಿರಣದಲ್ಲಿನ ಅಭಿಪ್ರಾಯಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಪ್ರೊ. ಎಂ. ರಾಮಚಂದ್ರಗೌಡ ಹೇಳಿದರು.
ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ, ಪ್ರೊ. ಎಸ್.ಎಂ. ಗಂಗಾಧರಯ್ಯ, ಡಾ. ಶೋಭಾ ನಾಯಕ ಸೇರಿದಂತೆ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

loading...