ಸರಿಯಾದ ಸಮಯಕ್ಕೆ ಆರ್‌ಸಿಯುಗೆ ಬಸ್ ಬಿಡುವಂತೆ ವಿದ್ಯಾರ್ಥಿಗಳ ಆಗ್ರಹ

0
5

ಬೆಳಗಾವಿ:ನಗರದ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡದಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಸೋಮವಾರ ನಗರ ಬಸ್ ನಿಲ್ದಾಣದ ಎದುರು ಏಕಾಏಕಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ನಗರ ಬಸ್‌ನಿಲ್ದಾಣದಿಂದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಲ್ಲಿ ಬೆಳಿಗ್ಗೆ ೯ ಗಂಟೆಗೆ ಬೀಡಬೇಕಾಗಿದ್ದ ಬಸ್ ಎರಡೂ ಗಂಟೆ (೧೧ ಗಂಟೆ)ತಡವಾದರೂ ಬಿಡಲಿಲ್ಲ. ಇದರಿಂದ ಬಸ್ ವಿಳಂಬದಿAದಾಗುವ ಸಮಸ್ಯೆ ಕುರಿತು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಬಳಿ ಹೇಳಿ, ಬೇಗ ಬಸ್ ಬೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸದೆ ಅಸಭ್ಯವಾಗು ವರ್ತಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿ ಹಿಡಿಶಾಪ ಹಾಕಿದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಾರ್ಕೇಟ ಠಾಣೆಯ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಲು ಮುಂದಾದರು, ಆದರೆ ವಿದ್ಯಾರ್ಥಿಗಳು ಮಾತ್ರ ಯಾವುದೇ ರೀತಿಯ ಸೊಪ್ಪು ಹಾಕದೆ. ಬಸ್ ತಡೆದು ಸಾರಿಗೆ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದು ಕೇವಲ ಒಂದೇ ದಿನದ ಸಮಸ್ಯೆ ಅಲ್ಲ. ದಿನದಿತ್ಯ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬೇಕಾಗಿದೆ. ಸರಿಯಾದ ಸಮಕ್ಕೆ ಬಸ್ ಬೀಡುವಂತೆ ಹಲವು ಬಾರಿ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಸಾರಿಗೆ ಅಧಿಕಾರಿಗಳು ಮತ್ತು ಬಸ್ ಚಾಲಕ, ನಿರ್ವಾಹಕರು ಅಸಭ್ಯವಾಗಿ ವರ್ತಿಸುವ ಮೂಲಕ ಮೊಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
ಅಲ್ಲದೇ ಇಲ್ಲಿರುವ ಅಧಿಕಾರಿಗಳು ವಿದ್ಯಾರ್ಥಿಗಳ ಜೀವನದ ಜತೆಗೆ
ಚೆಲ್ಲಾಟ ಆಡುತ್ತಿದ್ದಾರೆ. ಇನ್ಮೂಂದೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸದಿದ್ದರೆ ನಾವು ನಿರಂತರ ಹೋರಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಿರಣ ದುಖಾನದಾರ, ಸುರೇಶ ಜಂಗೋಬಾ, ಪ್ರಶಾಂಶ್ ಮುತಾಲಿಕ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

loading...