ಎಚ್‌ಡಿಕೆ ಕ್ಷೇತ್ರ ಅಭಿವೃದ್ಧಿಗಾಗಿ ಅನುದಾನ ನೀಡಿಲಿಲ್ಲ: ಶ್ರೀಮಂತ ಪಾಟೀಲ

0
26

ಕನ್ನಡಮ್ಮ ಸುದ್ದಿ
ಶೇಡಬಾಳ ೦೧: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕನಾದ ಸಮಯದಲ್ಲಿ ಸಾಕಷ್ಟು ಹಿಂಸೆ ಅನುಭವಿಸಿದೆ. ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಗವಾಡ ಮತಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡಲಿಲ್ಲ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷ ಪ್ರವೇಶಿಸಿರುವುದಾಗಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಬಾಳಾಸಾಬ ಪಾಟೀಲ ಹೇಳಿದರು.
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡುತ್ತಿದ್ದರು. ಅವರು ಮುಂದೆ ಮಾತನಾಡುತ್ತಾ, ಬೇಸಿಗೆಯಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿಗೆ ಕೃಷ್ಣಾ ನದಿ ಬತ್ತಿ ಹೋಗಿರುವದರಿಂದ ಮಹಾರಾಷ್ಟçದಿಂದ ನಾಲ್ಕು ಟಿಎಂಸಿ ನೀರು ಹರಿಸುವಂತೆ ಹಾಗೂ ಕಾಗವಾಡಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಲವಾರು ಬಾರಿ ಪರಿಪರಿಯಾಗಿ ವಿನಂತಿಸಿಕೊAಡರು ಮುಖ್ಯಮಂತ್ರಿಗಳು ಸ್ಪಂದಿಸಲಿಲ್ಲ. ಇದರಿಂದ ಬೇಸತ್ತು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ತೊರೆಯುವ ನಿರ್ಧಾರ ಕೈಗೊಂಡು ಬಿಜೆಪಿ ಪಕ್ಷ ಪ್ರವೇಶಿಸಿದೆ ಎಂದು ಶ್ರೀಮಂತ ಪಾಟೀಲ ವಿವರಿಸಿದರು.
ಇಗೀನ ಜನಪ್ರೀಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು ೨೦೦ ಕೋಟಿ ರೂ. ವಿಶೇಷ ಅನುದಾನವನ್ನು ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಮಗಾರಿಗಳು ಯುದ್ಯೋಪಾದಿಯಲ್ಲಿ ಜರುಗುತ್ತಿದ್ದು, ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈ ಬಲ ಪಡಿಸುವಂತೆ ಕರೆ ನೀಡಿದರು.
ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲರ ಜತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
..

loading...