ವಿಶ್ವ ಏಡ್ಸ್ ದಿನ : ಜಾಗೃತಿ ಜಾಥಾಕ್ಕೆ ಶಾಸಕ ಚರಂತಿಮಠ ಚಾಲನೆ

0
13

ಬಾಗಲಕೋಟೆ: ವಿಶ್ವ ಏಡ್ಸ್ ದಿನದ ಅಂಗವಾಗಿ “ಸಮುದಾಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ” ಎಂಬ ಘೋಷ ವ್ಯಾಖ್ಯದೊಂದಿಗೆ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ರವಿವಾರ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾ ಜಿಲ್ಲಾ ಆಸ್ಪತ್ರೆಯ ಆವರಣದಿಂದ ಪ್ರಾರಂಭವಾಗಿ ಮುಖ್ಯರಸ್ತೆ ಮೂಲಕ ನಗರಸಭೆ, ಎಸ್.ಬಿ.ಐ ಬ್ಯಾಂಕ್, ಎಲ್‌ಐಸಿ ವೃತ್ತ, ಪೊಲೀಸ್ ಪ್ಯಾಲೇಸ್, ನವನಗರ ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು.
ಜಾಥಾದಲ್ಲಿ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯ, ಪಿ.ಎನ್.ಎಂ.ಎನ್ ದಂತ ವೈದ್ಯಕೀಯ ಮಹಾವಿದ್ಯಾಲಯ, ಅರುಣೋದಯ ಪ್ಯಾರಾ ಮೆಡಿಕಲ್ ಕಾಲೇಜ, ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆಯ ಪ್ಯಾರೇ ಮೆಡಿಕಲ್ ಕಾಲೇಜ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಆಯುರ್ವೇಧ ಮಹಾವಿದ್ಯಾಲಯ ಹೋಮಿಯೋಪತಿ ಮಹಾವಿದ್ಯಾಲಯ ಸೇರಿದಂತೆ ಇತರೆ ಕಾಲೇಜಿನ ಒಟ್ಟು ಅಂದಾಜು ೫೦೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾದೂದ್ದಕ್ಕೂ ಘೋಷಣೆಗಳನ್ನು ಕೂಗಿದರು.
ಜಾಥಾ ಕಾರ್ಯಕ್ರಮದ ಮಧ್ಯದಲ್ಲಿ ನರೇನೂರಿನ ಸಂಗನಬಸಯ್ಯ ಹಿರೇಮಠ ಗೀಗೀ ಪದ ತಂಡವು ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಗೀತೆಗಳನ್ನು ಹಾಡಿದರು. ಎಲ್.ಐ.ಸಿ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಲಾಯಿತು. ಇದೇ ಸಂದರ್ಭದಲ್ಲಿ ಎಚ್‌ಐವಿ ಏಡ್ ಕುರಿತು ಡಿಸೆಂಬರ ೨ ಮತ್ತು ೩ ರಂದು ಹಮ್ಮಿಕೊಂಡ ಮನೆ ಮನೆ ಸಮಗ್ರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಾಥಾದಲ್ಲಿ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿ.ಪಂ ಜಿಲ್ಲಾ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸುಜಾತಾ ಸಿಂಗಾಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜಯಶ್ರೀ ಎಮ್ಮಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ  ಪಾಲ್ಗೊಂಡಿದ್ದರು.

ಜಿಲ್ಲೆಯಾದ್ಯಂತ ಮನೆ ಮನೆ ಲಾರ್ವೆ ಸರ್ವೆ ಕಾರ್ಯಕ್ಕೆ ಚಾಲನೆ
ಜಿಲ್ಲೆಯಾದ್ಯಂತ ಮೂರು ತಿಂಗಳುಗಳ ಕಾಲ ಹಮ್ಮಿಕೊಂಡ ಮನೆ ಮನೆಗಳ ಲಾರ್ವೆ ಸರ್ವೆ ಕಾರ್ಯಕ್ಕೆ ಶಾಸಕ ವೀರಣ್ಣ ಚರಂತಿಮಠ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.
ಈ ಲಾರ್ವೆ ಸರ್ವೆಯ ಕಾರ್ಯ ಕುರಿತು ಮಾತನಾಡಿದ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಮಾತನಾಡಿ ಮೂರು ತಿಂಗಳುಗಳ ಕಾಲ ಜರುಗು ಈ ಲಾರ್ವೆ ಸರ್ವೆ ಕಾರ್ಯದಲ್ಲಿ ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳ ಬಗ್ಗೆ ಹಾಗೂ ಸೊಳ್ಳೆ ಉತ್ಪತ್ತಿ ತಾಣಗಳ ಕುರಿತು ೨೦ ಪುಟಗಳ ಚೆಕ್‌ಲಿಸ್ಟ್ನಲ್ಲಿ ಮಾಹಿತಿ ಪಡೆಯಲಾಗುತ್ತದೆ ಎಂದರು.
ಮನೆ ಮನೆಗಳಲ್ಲದೇ ಶಾಲಾ-ಕಾಲೇಜು, ಸರಕಾರಿ ಕಚೇರಿ, ಎನ್‌ಡಬ್ಲೂಕೆಆರ್‌ಟಿಸಿ ಡಿಪೋಗಳಲ್ಲಿ ಈ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಲಾರ್ವೆ ಮುಕ್ತವಾಗಿದ್ದರೆ ಬೆಸ್ಟ್ ಗ್ರಾಮ, ಶಾಲಾ-ಕಾಲೇಜು, ಕಚೇರಿಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಈ ಕಾರ್ಯವನ್ನು ಜಿಲ್ಲೆಯ ೧೪೧೨ ಜನ ಆಶಾಕಾರ್ಯಕರ್ತೆರು ಕೈಗೊಳ್ಳಲಿದ್ದು, ಮೇಲ್ಚಿಚಾರಣೆಗಾಗಿ ಜಿಲ್ಲಾ, ತಾಲೂಕಾ ಮಟ್ಟದ ಮಲೇರಿಯಾ ವೈದ್ಯರ ತಂಡ ಮಾಡಲಿದೆ ಎಂದು ತಿಳಿಸಿದರು.

loading...