ಕೇರೂರ ಆರೋಗ್ಯ ಕೇಂದ್ರ ಸುಧಾರಣೆಗೆ ಒತ್ತಾಯ

0
18

ಕನ್ನಡಮ್ಮ ಸುದ್ದಿ
ಚಿಕ್ಕೋಡಿ ೦೨: ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಚಿಕ್ಕೋಡಿ ತಾಲೂಕಾ ಘಟಕದಿಂದ ತಾಲೂಕಾ ಆರೋಗ್ಯಾಧಿಕಾರಿ ಡಾ. ವಿ.ವಿ.ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.
ಸುಮಾರು ೧೮ರಿಂದ೧೯ ಸಾವಿರ ಜನಸಂಖ್ಯೆ ಹೊಂದಿರುವ ಕೇರೂರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರು ಮತ್ತು ಸ್ಟಾಪ್ ನರ್ಸ ಇಲ್ಲದೇ ಗ್ರಾಮದ ಬಡ ರೋಗಿಗಳು ಸೂಕ್ತ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಆದ್ದರಿಂದ ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು, ಸ್ಟಾಪ್ ನರ್ಸ ಮತ್ತು ಅಂಬ್ಯುಲೆನ್ಸ್ ಸೇವೆ ಒದಗಿಸುವ ಮುಖಾಂತರ ಬಡ ಜನರಿಗೆ ಸೂಕ್ತ ಆರೋಗ್ಯ ಸೇವೆ ಕಲ್ಪಿಸಿಕೊಡಲು ಆರೋಗ್ಯಾಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.
ಸಿಬ್ಬಂದಿ ಕೊರತೆ ಇರುವುದರಿಂದ ಈ ಆಸ್ಪತ್ರೆಯಲ್ಲಿ ಸರಿಯಾಗಿ ಚುಚ್ಚು ಮದ್ದು ಸೇರಿದಂತೆ ಔಷದೋಪಚಾರವು ದೊರಕುತ್ತಿಲ್ಲ. ಈ ಗ್ರಾಮದಿಂದ ಚಿಕ್ಕೋಡಿಗೆ ಹೋಗಬೇಕಾದರೂ ೧೯ ಕಿ.ಮೀ.ಸಂಚರಿಸಿ ಹೋಗಬೇಕು. ಇದರಿಂದ ಬಡ ಜನರು ಆರೋಗ್ಯ ಸೇವೆಗಾಗಿ ಪರದಾಡುವಂತಾಗಿದೆ. ಆದ್ದರಿಂದ ಕೂಡಲೇ ಸಂಬAಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಈ ಆಸ್ಪತ್ರೆಗೆ ವೈದ್ಯಾಧಿಕಾರಿ ಸೇರಿದಂತೆ ಸಮರ್ಪಕ ಸಿಬ್ಬಂದಿ ಕೊಡುವ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆಯ ಕಾರ್ಯಕರ್ತರು ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಉಗ್ರ ಹೋರಾಟ ನಡೆಸುವ ಜತೆಗೆ ಉಪವಾಸ ಧರಣ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾ ಅಧ್ಯಕ್ಷ ಮಂಜುನಾಥ ಪರಗೌಡಾ, ಖಾನಪ್ಪ ಬಾಡಕರ, ಸದಾಶಿವ ಪಾಟೀಲ, ಭರಮಾ ಬೀಳಗೆ, ಮಹಾದೇವ ಬಾಡಕರ, ಲಕ್ಷö್ಮಣ ದೇವನ್ನಗೋಳ, ಸುಭಾಷ ಬೀಳಗೆ, ರಾಮಾ ಹೆಗಡೆ, ಭೀಮಾ ಬೀಳಗೆ, ಅಪ್ಪಣ್ಣಾ ಪೂಜೇರಿ ಮುಂತಾದವರು ಉಪಸ್ಥಿತರಿದ್ದರು.
..

loading...