ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

0
2

ಹಾವೇರಿ: ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಿರೇಕೆರೂರು ಹಾಗೂ ರಾಣೇಬೆನ್ನೂರು ನಗರದಲ್ಲಿ ಸೋಮವಾರ ಬೈಕ್ ರ‍್ಯಾಲಿ ಹಾಗೂ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಹಿರೇಕೆರೂರು ನಗರದ ಸರ್ವಜ್ಞ ವೃತ್ತ ಮತ್ತು ಚೌಡಮ್ಮ ವೃತ್ತದಲ್ಲಿ ಬೈಕ್ ರ‍್ಯಾಲಿ ಹಮ್ಮಿಕೊಂಡು ನಗರದ ವಿವಿಧ ಬಡಾವಣೆಗಳಲ್ಲಿ ಸಂಚಾರ ಕೈಗೊಂಡು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ರಾಣೇಬೆನ್ನೂರಿನ ರೈಲ್ವೆ ವೃತ್ತ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಹಾಗೂ ತರಕಾರಿ ಮಾರುಕಟ್ಟೆ ಬಳಿ ಮತದಾನ ಜಾಗೃತಿ ಕೈಗೊಂಡು ಬೈಕ್ ರ‍್ಯಾಲಿ, ಪ್ರತಿಜ್ಞಾವಿಧಿ ಬೋಧನೆ, ಕರಪತ್ರ ವಿತರಣೆ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ, ಎಂ.ಎಚ್.ಪಾಟೀಲ ಇತರರು ಉಪಸ್ಥಿತರಿದ್ದರು.

loading...