ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ ನೇಮಕ ಸಂಭವ

0
11

ನವದೆಹಲಿ: ಬರುವ ಫೆಬ್ರವರಿ ತಿಂಗಳಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರು ನೇಮಕಗೊಳ್ಳಲಿದ್ದಾರೆ. ಬಿಹಾರ, ರಾಜಸ್ಥಾನ ಮತ್ತು ಕರ್ನಾಟಕ ಸೇರಿದಂತೆ ಕೆಲ ರಾಜ್ಯ ಘಟಕಗಳಿಗೆ ಹೊಸ ಮುಖ್ಯಸ್ಥರನ್ನು ನೇಮಿಸುವ ಸಾಧ್ಯತೆಯಿದೆ.
ಈ ಪ್ರಕ್ರಿಯೆಗಳನ್ನು ಸಂಕ್ರಾಂತಿಯ ನಂತರ ಆರಂಭಿಸಲು ಬಿಜೆಪಿ ವರಿಷ್ಠರು ಭಾವಿಸಿದ್ದಾರೆ. ಕೆಲವು ತಿಂಗಳಗಳಿಂದ ನಡೆಯುತ್ತಿರುವ ಪಕ್ಷದ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಜೆ.ಪಿ.ನಡ್ಡಾ ಅವರಿಗೆ ಬಿಟ್ಟುಕೊಡಲು ಅಮಿತ್ ಶಾ ಒಲವು ತೋರುವ ಸಾಧ್ಯತೆ ಇದೆ. ನಡ್ಡಾ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು, ನರೇಂದ್ರ ಮೋದಿ ಸಂಪುಟದಲ್ಲಿ ಅತ್ಯಂತ ಮಹತ್ವದ ಗೃಹ ವ್ಯವಹಾರಗಳ ಸಚಿವರಾಗಿ ಹೊಣೆ ನಿಭಾಯಿಸುತ್ತಿದ್ದಾರೆ.

loading...