ರಡ್ಡಿ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಿ: ಮಳ್ಳೂರ

0
19

ರಡ್ಡಿ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಿ: ಮಳ್ಳೂರ
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ರಡ್ಡಿ ಸಮುದಾಯದ ಶಾಸಕರನ್ನು ಕಡೆಗಣಿಸಲಾಗಿದ್ದು, ಸಂಪುಟ ವಿಸ್ತರಣೆಯಲ್ಲಿ ರಡ್ಡಿ ಸಮುದಾಯ ಕನಿಷ್ಠ ಮೂರು ಜನ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕು ಎಂದು ಬೆಳಗಾವಿ ರೆಡ್ಡಿ ಸಂಘದ ಅಧ್ಯಕ್ಷ ರಾಮಣ್ಣ ಮುಳ್ಳೂರ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಎಲ್ಲ ಸರ್ಕಾರಗಳಲ್ಲೂ ರಡ್ಡಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಆದರೇ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ರಡ್ಡಿ ಸಮಾಜ ಸಚಿವ ಸ್ಥಾನದಿಂದ ವಂಚಿತವಾಗಿದೆ. ಸಿಎಂ ಯಡಿಯೂರಪ್ಪನವರು ತಮ್ಮ ಸಚಿವ ಸಂಪುಟದಲ್ಲಿ ರಡ್ಡಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಲು ಕ್ರಮಕೈಗೊಳ್ಳಬೇಕು. ರಾಜ್ಯಾದ್ಯಂತ ೯ ಜನ ಬಿಜೆಪಿಯ ಶಾಸಕರು ಹಾಗೂ ೨ ವಿಧಾನ ಪರಿಷತ್ ಸದಸ್ಯರು ಆಯ್ಕೆಯಾಗಿದ್ದಾರೆ. ಆದ್ದರಿಂದ ಯಡಿಯೂರಪ್ಪ ತಮ್ಮ ಸಚಿವ ಸಂಪುಟ ವಿಸ್ತರಣೆಯಲ್ಲಿ ರಡ್ಡಿ ಸಮಾಜದ ಶಾಸಕರಿಗೆ ಆದ್ಯತೆ ನೀಡಬೇಕು.
ಕನಿಷ್ಠ ಎರಡು ಶಾಸಕರಿಗಾದರೂ ಸಚಿವ ಸ್ಥಾನ ನೀಡಬೇಕು. ರಡ್ಡಿ ಸಮಾಜ ಮೊದಲಿನಿಂದಲೂ ಸಚಿವ ಸ್ಥಾನಕ್ಕೆ ಅರ್ಹವಾಗಿದೆ. ಸ್ವಾತಂತ್ರ‍್ಯ ಹೋರಾಟದಲ್ಲಿಯೂ ರಡ್ಡಿ ಸಮಾಜ ಮುಂಚೂಣಿಯಲ್ಲಿದೆ ಎಂದರು.

ಇನ್ನು ಮಾಜಿ ಸಿಎಂ ನಿಜಲಿಂಗಪ್ಪ, ಎಸ್.ಆರ್. ಬೊಮ್ಮಾಯಿ, ವಿರೇಂದ್ರ ಹೆಗಡೆ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸೇರಿದಂತೆ ಕುಮಾರಸ್ವಾಮಿ ಅವರ ಸಚಿವ ಸಂಪುಟದಲ್ಲಿಯೂ ರಡ್ಡಿ ಸಮಾಜದ ಶಾಸಕರಿಗೆ ಆದ್ಯತೆ ನೀಡಲಾಗಿತ್ತು. ಆದರೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮಾತ್ರ ರಡ್ಡಿ ಸಮಾಜದ ಶಾಸಕರೂ ಸಚಿವ ಸ್ಥಾನದಿಂದ ಕೈಬಿಡಲಾಗುತ್ತಿದೆ. ರಡ್ಡಿ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮುಂದುವರೆದಿದೆ. ಅನೇಕ ಅನುಭವಿ ಜನಪ್ರತಿನಿಧಿಗಳು ರಡ್ಡಿ ಸಮಾಜದಲ್ಲಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ಕೊಟ್ಟು ಅವರಿಗೆ ಸಮಾಜ ಸೇವೆಗೆ ಅವಕಾಶ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಆದ್ದರಿಂದ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರೆಡ್ಡಿ ಸಮುದಾಯಕ್ಕೆ ಆದ್ಯತೆ ನೀಡದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಉಪಾಧ್ಯಕ್ಷರಾದ ಬಿ.ಎನ್. ಬಾವಲತ್ತಿ, ಬಿ.ಎನ್. ನಾಡಗೌಡ, ಎ.ಬಿ.ರಂಜನಗಿ, ನಾರಾಯಣ ಕೆಂಚರೆಡ್ಡಿ, ಆರ್.ಎಲ್.ಕಟಕಲ್, ಆರ್.ಎಲ್. ಅರಕೇರಿ, ಸುನೀಲ ವಂಟಗೂಡಿ, ಶಂಕರ ಅರಕೇರಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

loading...