ಸೋ ಕಾಲ್ಡ್ ಯಡಿಯೂರಪ್ಪರದ್ದು ಕೊಲೆಗಡುಕ ಸರ್ಕಾರ: ಎಚ್.ಡಿ.ಕುಮಾರಸ್ವಾಮಿ

0
11

ಬೆಂಗಳೂರು:-ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿಗೆ ಭೇಟಿ ನೀಡಿದಂದೇ ಗೋಲಿಬಾರಿಗೆ ಬಲಿಯಾದವರು ಗಲಭೆಯಲ್ಲಿ ಭಾಗಿಯಾದವರು ಎಂದು ಪೊಲೀಸರು ಯಡಿಯೂರಪ್ಪನವರಿಗೆ ಮಾಹಿತಿ ನೀಡಿರಲಿಲ್ಲವೇ? ಅಂದು ಯಡಿಯೂರಪ್ಪನವರಿಗೆ ಆ ಎಡಿಟೆಡ್ ವೀಡಿಯೋ ತೋರಿಸಿರಲಿಲ್ಲವೇ? ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಅಭಿಪ್ರಾಯ ಭೇದವನ್ನು ಬಿಜೆಪಿ ಸಹಿಸುವುದಿಲ್ಲ. ಹೋರಾಟಗಳನ್ನು, ಹೋರಾಟಗಾರರನ್ನು ‘ಸೋ ಕಾಲ್ಡ್ ಹೋರಾಟಗಾರ’ ಯಡಿಯೂರಪ್ಪ ಸಹಿಸುವುದಿಲ್ಲ. ಯಡಿಯೂರಪ್ಪಗೆ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ ಎಂದು ಸವಾಲು ಹಾಕಿದ್ದಾರೆ.
ಸತ್ತವರ ಹೆಸರು ಆರೋಪಿಗಳ ಪಟ್ಟಿಯಲ್ಲಿದೆ ಎಂದು ಪರಿಹಾರ ವಂಚನೆಗೆ ಯಡಿಯೂರಪ್ಪ ನೀಡಿರುವ ಸಬೂಬು ಎಂತಹ ಕ್ಷುಲ್ಲಕ ? ಹೋರಾಟ ಅಪರಾಧವೇ ? ಹೋರಾಟ ಸಂವಿಧಾನ ಬದ್ಧ ಹಕ್ಕು. ಹೋರಾಟಗಳನ್ನು ಹತ್ತಿಕ್ಕುವವರು ಸಂವಿಧಾನ ವಿರೋಧಿಗಳು ದೇಶಭ್ರಷ್ಟರು.ಆಡಳಿತದಲ್ಲಿ ಜನರಿಗೆ, ಹೋರಾಟಗಾರರಿಗೆ ರಕ್ಷಣೆ ಇಲ್ಲ. ಎಷ್ಟೇ ಆದರೂ ಇದು ಅನರ್ಹ ಸರ್ಕಾರವಲ್ಲವೇ? ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಕುಟುಕಿದ್ದಾರೆ.

loading...