ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ: ಸಿದ್ದರಾಮಯ್ಯ ಭವಿಷ್ಯ

0
5

ಮೈಸೂರು:- ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹದಿನಾಲ್ಕು ತಿಂಗಳು ಮೈತ್ರಿ ಸರ್ಕಾರ‌ದಲ್ಲಿ ಮುಖ್ಯಮಂತ್ರಿಯಾಗಿ ಅವರೇನೂ ಸಾಧನೆ ಮಾಡಿಲ್ಲ. ಹೀಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮತ್ತೊಮ್ಮೆ ನನಗೆ ಅಧಿಕಾರ ಕೊಡಿ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಇಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇಳಬಹುದು, ಆದರೆ ಜನ ಕೊಡಬೇಕಲ್ಲ ಎಂದು ವ್ಯಂಗ್ಯವಾಡಿದರು.
ಸರ್ವೋಚ್ಛ ನ್ಯಾಯಾಲಯವೇ ಅನರ್ಹರು ಎಂದು ತೀರ್ಪು ನೀಡಿದ ಮೇಲೆ ಮತ್ತೆ ಅವರ ಬಗ್ಗೆ ಹೆಚ್ಚು‌ ಮಾತಾಡುವ ಅವಶ್ಯಕತೆಯಿಲ್ಲ ಎಂದು
ನಿನ್ನೆ ಸಚಿವರಾದವರ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಜನತಾ ನ್ಯಾಯಾಲಯದಲ್ಲಿ ಗೆದ್ದಿರುವಾಗ ಸಿದ್ದರಾಮಯ್ಯನವರದ್ದು ಏನಿದೆ ಎಂದಿದ್ದ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆಗೆ ಸಿದ್ದರಾಮಯ್ಯ ಈ ರೀತಿ ತಿರುಗೇಟು ನೀಡಿದರು.

ಇತ್ತೀಚಿನ ದಿನಗಳಲ್ಲಿ‌ ಚುನಾವಣೆಗಳು ಹೇಗೆ ನಡೆಯುತ್ತವೆ ಎಂಬುದು ಗೊತ್ತಿದೆ. ಆ ಬಗ್ಗೆ ತಾವು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸುಪ್ರೀಂ ಕೋರ್ಟೇ ಅವರನ್ನು ಅನರ್ಹರು ಎಂದು ಹೇಳಿದೆ ಎಂದು ಸಿದ್ದರಾಮಯ್ಯ ಕುಟುಕಿದರು.

loading...